ಬಿಜೆಪಿ ಅಡ್ಯಾರು ಮಹಾಶಕ್ತಿ ಕೇಂದ್ರ ಮಹಾಸಭೆ

Gur_BJP
Published on

ಗುರುಪುರ: ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ಅಡ್ಯಾರು ಮಹಾಶಕ್ತಿ ಕೇಂದ್ರದ ವಿಶೇಷ ಮಹಾಸಭೆ ಸೋಮವಾರ ನೀರುಮಾರ್ಗದಲ್ಲಿ ನಡೆಯಿತು.

ಶಾಸಕ ಡಾ.ಭರತ್​ ಶೆಟ್ಟಿ ಪಕ್ಷದ ಸದಸ್ಯತ್ವ ಅಭಿಯಾನ ಮತ್ತು ಸಂಘಟನೆ ಕುರಿತು ಮಾತನಾಡಿದರು.

ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್​ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಮಲಾಕ್ಷ, ಉಳಾಯಿಬೆಟ್ಟು ಗ್ರಾ.ಪಂ. ಅಧ್ಯಕ್ಷ ಹರಿಕೇಶ ಶೆಟ್ಟಿ ನಡಿಗುತ್ತು, ಸಮಿತಿ ಸದಸ್ಯ ಗೋಕುಲದಾಸ ಶೆಟ್ಟಿ, ಮಂಡಲ ಕಾರ್ಯದರ್ಶಿ ಸಚಿನ್​ ಅಡಪ, ಮಹಾಶಕ್ತಿ ಕೇಂದ್ರ ಸಮಿತಿ ಸದಸ್ಯರಾದ ಸುಧೀರ್​ ಕಾಮತ್​, ಕಿಶೋರ್​ ಉಗ್ಗಕೋಡಿ, ಯಶವಂತಿ ಮಲ್ಲೂರು, ಜಿಲ್ಲಾ ಮಂಡಲ ಮೋರ್ಚಾ ಪದಾಧಿಕಾರಿಗಳು, ಗ್ರಾ.ಪಂ. ಸದಸ್ಯರು, ಗ್ರಾಮ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಬೂತ್​ ಅಧ್ಯಕ್ಷ, ಕಾರ್ಯದರ್ಶಿ, ಕಾರ್ಯಕರ್ತರು ಉಪಸ್ಥಿತರಿದ್ದರು.

ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಅಜಿತ್​ ಶೆಟ್ಟಿ ಸ್ವಾಗತಿಸಿದರು. ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋಹನ್​ ಆಳ್ವ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net