

ವಿಜಯವಾಣಿ ಸುದ್ದಿಜಾಲ ಗದಗ
ಗದಗ ಜಿಲ್ಲೆಯಾದ್ಯಂತ ಬುಧವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಮತ್ತು ತಾಲೂಕು ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರು, ಮಂಡಳ ಅಧ್ಯಕ್ಷರು ಮತ್ತು ಬಿಜಪಿ ಮುಖಂಡರ ಸಮ್ಮುಖದಲ್ಲಿ ಜನ್ಮದಿನಾಚರಣೆ ಆಚರಿಸಲಾಯಿತು.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಅಟಲ್ ಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಬಿಜೆಪಿ ಮಾಜಿ ಜಿಲ್ಲಾಧ್ಯ ಎಂ. ಎಸ್. ಕರೀಗೌಡ್ರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರಿಗೌಡ್ರ, ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಶತ್ರು. ತಮ್ಮ ರಾಜಕೀಯ ಚಿಂತನೆಗಳಿಗೆ ಕಟಿಬದ್ಧರಾದವರು. ಅಕ್ಟೋಬರ್ 13, 1999ರಲ್ಲಿ ಹೊಸ ಸಮ್ಮಿಶ್ರ ಸರ್ಕಾರ ಎನ್ಡಿಎ ಮುಖ್ಯಸ್ಥರಾಗಿ ಎರಡನೇ ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಪಂಡಿತ್ ಜವಾಹರ್ ಲಾಲ್ ನೆಹರು ಅವರ ನಂತರ ಭಾರತದ ಪ್ರಧಾನಮಂತ್ರಿಯಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದ ಪ್ರಥಮ ಪ್ರಧಾನಮಂತ್ರಿ ಎಂಬು ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಹಿರಿಯ ಸಂಸದೀಯ ಪಟುವಿನ ರಾಜಕೀಯ ಬದುಕು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಿಸ್ತರಿಸಿದೆ. ವಾಜಪೇಯಿ ಅವರು ಲೋಕಸಭೆಗೆ ಒಂಭತ್ತು ಬಾರಿ ಹಾಗೂ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿರುವುದು ಒಂದು ದಾಖಲೆ ಆಗಿದೆ ಎಂದರು.
ಜಿಲ್ಲಾ ಬಿಜೆಪಿ ಕೋಶಾಧ್ಯಕ್ಷ ನಾಗರಾಜ ಕುಲಕಣಿರ್ ಮಾತನಾಡಿ, ಪ್ರಧಾನಿ ಹುದ್ದೆ ಅಷ್ಟೇ ಅಲ್ಲದೇ ವಿದೇಶಾಂಗ ಸಚಿವರಾಗಿ, ಸಂಸತ್ತಿನ ವಿವಿಧ ಮುಖ್ಯ ಸ್ಥಾಯಿ ಸಮಿತಿಗಳ ಅಧ್ಯಕ್ಷರಾಗಿ ಹಾಗೂ ವಿರೋಧಪಕ್ಷದ ನಾಯಕರಾಗಿ ಅವರು ಭಾರತದ ಸ್ವಾತಂತ್ರ್ಯ ನಂತರ ದೇಶೀಯ ಮತ್ತು ವಿದೇಶಿ ನೀತಿಗಳಿಗೆ ಸ್ಪಷ್ಟ ರೂಪ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ವಿದ್ಯಾಥಿರ್ ದಿನಗಳಲ್ಲೇ ರಾಷ್ಟ್ರೀಯವಾದಿ ರಾಜಕಾರಣದೊಂದಿಗೆ ಹೋರಾಟಕ್ಕೆ ಧುಮುಕಿದರು. ಬಿಟ್ರಿಷ್ ಆಳ್ವಿಕೆಯನ್ನು ಕೊನೆಗೊಳಿಸಲು 1942ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಗೆ ಸೇರಿದರು. ರಾಜಕೀಯ ಶಾಸ್ತ್ರ ಮತ್ತು ಕಾನೂನು ವಿದ್ಯಾಥಿರ್ಯಾಗಿದ್ದಾಗಲೇ ಕಾಲೇಜಿನಲ್ಲಿ ವಿದೇಶಾಂಗ ವ್ಯವಹಾರಗಳಲ್ಲಿ ಅಪಾರ ಆಸಕ್ತಿಯನ್ನು ಬೆಳೆಸಿಕೊಂಡಿದ್ದರು ಎಂದರು.
ಬಿಜೆಪಿ ಮುಖಂಡ ರವಿ ದಂಡಿನ ಮಾತನಾಡಿ, ವಾಜಪೇಯಿ ಅವರು ಓರ್ವ ಪತ್ರಕರ್ತ ವೃತ್ತಿಯನ್ನು ಆರಂಭಿಸಿದರು. 1951ರಲ್ಲಿ ಆ ವೃತ್ತಿಯನ್ನು ಬಿಟ್ಟು ಭಾರತೀಯ ಜನ ಸಂ ಸೇರಿದರು. ಇದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮುಖ್ಯ ಭಾಗವಾದ ಇಂದಿನ ಭಾರತೀಯ ಜನತಾ ಪಕ್ಷವಾಗಿದೆ. ಅವರೊಳಗೊಬ್ಬ ಕವಿಯೂ ಇದ್ದ. ನಿರಂತರ ರಾಜಕೀಯ ಚಟುವಟಿಕೆಗಳ ನಡುವೆಯೂ ಅವರು ಸಂಗೀತ ಮತ್ತು ಅಡುಗೆ ಬಗ್ಗೆ ವಿಶೇಷ ಒಲವು ಹೊಂದಿದ್ದರು ಎಂದರು.
ಎಂ.ಎಂ.ಹಿರೇಮಠ, ಜಗನ್ನಾಥಸಾ ಭಾಂಡಗೆ, ವಿಜಯಕುಮಾರ ಗಡ್ಡಿ ಅವರು ವಾಜಪೇಯಿ ಅವರ ಕುರಿತು ಸಂದಭೋರ್ಚಿತವಾಗಿ ಮಾತನಾಡಿದರು.
ನಗರ ಮಂಡಲ ಅಧ್ಯ ಅನೀಲ ಅಬ್ಬಿಗೇರಿ, ಸುಧೀರ ಕಾಟಿಗರ, ಸಂತೋಷ ಅಕ್ಕಿ, ದೇವಪ್ಪ ಗೊಟೂರ, ಕಾನೂನು ಪ್ರಕೋಷ್ಠದ ಸಂಚಾಲಕ ಕೆ. ಪಿ. ಕೋಟಿಗೌಡ್ರ, ಬೂದಪ್ಪ ಹಳ್ಳಿ, ಪ್ರಕೋಷ್ಠಗಳ ಸಹ&ಸಂಯೋಜಕ ರಮೇಶ ಸಜ್ಜಗಾರ, ಅಮರನಾಥ ಗಡಗಿ, ಮಂಜುನಾಥ ಶಾಂತಗೇರಿ, ಮಾಂತೇಶ ಬಾತಾಖಾನಿ, ಸ್ವಾತಿ ಅಕ್ಕಿ, ಯೋಗೇಶ್ವರಿ ಭಾವಿಕಟ್ಟಿ, ವಿಶ್ವನಾಥ ಟೆಂಗಿನಕಾಯಿ, ನಾಗರಾಜ ತಳವಾರ, ಅಪ್ಪು ಕೊಟಗಿ, ಮೇಘಾ ಕೊಟ್ಟೂರ, ಬಸವರಾಜ, ಮೋಹನ ಕೋರಿ, ವಿನಾಯಕ ಹೊರಕೇರಿ, ವಿರುಪಾ ಹಸಬಿ, ವಿನೋದ ಹಂಸನೂರ ಉಲವರು ಇದ್ದರು.