

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 73ನೇ ಜನ್ಮದಿನ ಹಾಗೂ ಸೇವಾ ಪಾಕ್ಷಿಕದ ಅಂಗವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ 73 ಯೂನಿಟ್ ರಕ್ತ ಸಂಗ್ರಹವಾಯಿತು.
ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಮಾತನಾಡಿ, ಪ್ರಧಾನಿ ಅವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ರಕ್ತದಾನ ವಿಶ್ವದಲ್ಲಿಯೇ ಶ್ರೇಷ್ಟ. ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ. ಹಾಗಾಗಿ ಎಲ್ಲರೂ ರಕ್ತದಾನ ಮಾಡಬೇಕು. ರಕ್ತದಾನದಿಂದ ಆರೋಗ್ಯ ಚೆನ್ನಾಗಿರುತ್ತದೆ ಎಂದು ಸಲಹೆ ನೀಡಿದರು.
ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುವುದಿಲ್ಲ. ಜತೆಗೆ ಇತರೆ ಕಾಯಿಲೆಯೂ ಬರದಂತೆ ತಡೆಯಲು ಸಹಕಾರಿಯಾಗಿದೆ. ಪುರುಷರು ಮೂರು ತಿಂಗಳು ಹಾಗೂ ಮಹಿಳೆಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಸಮಾಜದಲ್ಲಿ ಇದು ಉತ್ತಮ ಕೆಲಸವಾಗಿದೆ ಎಂದು ಹೇಳಿದರು.
ಶಿಬಿರದಲ್ಲಿ ಮುಡಾ ಮಾಜಿ ಅಧ್ಯಕ್ಷೆ ವಿದ್ಯಾನಾಗೇಂದ್ರ, ಮಿಮ್ಸ್ ರಕ್ತನಿಧಿ ಕೇಂದ್ರದ ಡಾ.ಸುಹಾಸಿನಿ, ಮಹಮದ್ ರಫಿ, ಬಿಜೆಪಿ ಮುಖಂಡರಾದ ವಿವೇಕ್, ಪ.ನಾ.ಸುರೇಶ್, ಹಾಲಹಳ್ಳಿ ವಸಂತ್‌ಕುಮಾರ್, ರಾಜೇಶ್, ನಟರಾಜ್, ಚಂದ್ರು, ಪ್ರಸನ್ನಕುಮಾರ್, ಕೇಶವ್, ಶಿವಲಿಂಗ ಇತರರಿದ್ದರು.