

ಬೆಂಗಳೂರು: ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಜತೆ ಸದಾ ಇರುತ್ತೇನೆ. ಕಳೆದ ಚುನಾವಣೆಯಲ್ಲಿ ಬೆಂಬಲಿಸಿ ಹೆಚ್ಚಿನ ಮತದೊಂದಿಗೆ ಗೆಲ್ಲಿಸಿದ್ದೀರಿ. ಈ ಬಾರಿಯೂ ಹೆಚ್ಚಿನ ಮತದೊಂದಿಗೆ ಮತ ನೀಡಿ ಎಂದು ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಮನವಿ ಮಾಡಿದ್ದಾರೆ.
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಮಾಕ್ಷಿಪಾಳ್ಯದಲ್ಲಿ ಸವಿತಾ ಸಮಾಜದವರೊಡನೆ ಸಮಾಲೋಚನೆ ನಡೆಸಿ ಮಾತನಾಡಿದರು.
ಕ್ಷೇತ್ರದ ಜನರ ಸಮಸ್ಯೆಗಳಿಗೆ ಯಾವಾಗಲೂ ನಾನು ಸ್ಪಂದಿಸುತ್ತೇನೆ. ಅತ್ಯುತ್ತಮ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಅವರಿಗೆ ಉಚಿತಶಿಕ್ಷಣ ಕೊಡುವಂತಹ ಕೆಲಸವನ್ನು ಮಾಡುತ್ತೇವೆ ಎಂದರು.
ಕ್ಷೇತ್ರದ ಜನರಿಗೆ ಅನುಕೂಲತೆ ಕಲ್ಪಿಸುವ ಮೂಲ ಉದ್ದೇಶದಿಂದ ಮಹಾಲಕ್ಷ್ಮೀ ಲೇಔಟ್ನಲ್ಲಿ ‘ನಮ್ಮ ಕ್ಲಿನಿಕ್’ ಪ್ರಾರಂಭಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಂಡು ಆರೋಗ್ಯವಂತ ಜೀವನ ನಡೆಸಲು ಮುಂದಾಗಿ ಎಂದರು. ಕ್ಷೇತ್ರದ ಜನತೆಯ ಕುಂದುಕೊರತೆಗಳನ್ನು ಬಗೆಹರಿಸá-ತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡುತ್ತ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಅವರು ತಿಳಿಸಿದರು.
ಮಾಜಿ ಉಪಮೇಯರ್ ಎಸ್. ಹರೀಶ್, ಬಿಬಿಎಂಪಿ ಮಾಜಿ ಸದಸ್ಯ ರಾಜೇಂದ್ರಕುಮಾರ್, ಶಿವಾನಂದಮೂರ್ತಿ, ಸಿಮೆಂಟ್ ಶ್ರೀನಿವಾಸ್, ಧನರಾಜ್, ಜಯರಾಮ್ ಪುಟ್ಟಸ್ವಾಮಿ, ಸ್ಥಳೀಯ ಬಿಜೆಪಿ ಮುಖಂಡರಿದ್ದರು.