ಬಿಜೆಪಿಯಿಂದ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ

New bjp gandhi
Published on

ಹುಬ್ಬಳ್ಳಿ: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಗುರುವಾರದಂದು ಮಹಾತ್ಮಾ ಗಾಂಧೀಜಿ ಹಾಗೂ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಯವರ ಜನ್ಮದಿನ ಆಚರಿಸಲಾಯಿತು.

ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ಮಹಾತ್ಮಾ ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದ ಮುಂದಾಳತ್ವ ವಹಿಸಿ, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ಉಪ್ಪಿನ ಸತ್ಯಾಗ್ರಹ, ಅಹಿಂಸಾ ಪರಮೋ ಧರ್ಮದ ತತ್ವದಡಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು ಎಂದರು.

ಮಹಾತ್ಮಾ ಗಾಂಧೀಜಿ ಅವರು ಮುಖ್ಯವಾಗಿ ಸ್ವಚ್ಚತೆಗೆ ಹೆಚ್ಚಿನ ಒತ್ತು ಕೊಟ್ಟಿದ್ದರು. ಪ್ರತಿಯೊಬ್ಬ ಭಾರತೀಯ ಮಹಾತ್ಮಾ ಗಾಂಧೀಜಿ ಅವರನ್ನು ಅನುಸರಿಸಬೇಕು. ದೇಶವನ್ನು ಪ್ರಗತಿಯತ್ತ ಮುನ್ನಡೆಸಿದ ಕೀರ್ತಿ ಅಂದಿನ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರೀ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

ವಸಂತ ನಾಡಜೋಶಿ, ಮಂಜುನಾಥ ಕಾಟಕರ, ಪವಾಡಪ್ಪ ಛಲವಾದಿ, ಗುರು ಬನ್ನಿಕೊಪ್ಪ, ಚಂದ್ರು ಮುಶಣ್ಣವರ, ನೀಲಕಂಠ ತಡಸದಮಠ, ಮಂಜು ಪಾಳೇದ, ರಾಜು, ಬಶೀರ ಗಿರಣಿ, ನರಸಯ್ಯ ಬಿಜವಾಡ, ಆನಂದ ಮದರಿ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net