ಬಿಜೆಪಿ ಸಂಭ್ರಮಾಚರಣೆ

4spt1
ಸೋಮವಾರಪೇಟೆ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಚುನಾವಣೆ ಗೆಲುವಿಗೆ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿದರು. ಮನುಕುಮಾರ್, ಸೋಮೇಶ್,ಅಭಿಮನ್ಯು ಕುಮಾರ್ ಇತರರು ಇದ್ದರು.
Published on

ಸೋಮವಾರಪೇಟೆ: ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಾಸ್ಥಾನ ಹಾಗು ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸೋಮವಾರ ವಿಜಯೋತ್ಸವ ಆಚರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಹ್ಯಾಟ್ರಿಕ್ ಗೆಲವು ಸಾಧಿಸಲಿದೆ. ಆರ್ಥಿಕಾಭಿವೃದ್ಧಿಯಲ್ಲಿ ದೇಶ ಮುಂಚೂಣಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಮತ್ತು ಆಡಳಿತವನ್ನು ದೇಶದ ಜನತೆ ಒಪ್ಪಿಕೊಂಡಿದ್ದಾರೆ ಎಂಬುದು ಈ ಫಲಿತಾಂಶದಿಂದ ತಿಳಿದುಬಂದಿದೆ ಎಂದು ಹೇಳಿದರು.

ಮಂಡಲ ಅಧ್ಯಕ್ಷ ಚಂದ್ರಶೇಖರ್, ಮನುಕುಮಾರ್ ರೈ, ನಗರ ಅಧ್ಯಕ್ಷ ಎಸ್.ಆರ್.ಸೋಮೇಶ್, ಪ್ರಮುಖರಾದ ಅಭಿಮನ್ಯು ಕುಮಾರ್, ರೂಪ ಸತೀಶ್, ಮಹೇಶ್ ತಿಮ್ಮಯ್ಯ, ಧರ್ಮಪ್ಪ, ಎಚ್.ಕೆ.ಮಾದಪ್ಪ, ಪಿ.ಕೆ.ಚಂದ್ರು, ಎಚ್.ಎನ್.ತಂಗಮ್ಮ, ಲೀಲಾ ನಿರ್ವಾಣಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net