ಬಿಜೆಪಿ ಸೆಂಟ್ರಲ್ ಕ್ಷೇತ್ರದ ಸಭೆ

NEW BJP MEETING NEW
Published on

ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರದಂದು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿತ್ತು.

ರಾಜ್ಯಸಭಾ ಸದಸ್ಯ ಮತ್ತು ಲೋಕಸಭೆಯ ಉಸ್ತುವಾರಿ ಈರಣ್ಣ ಕಡಾಡಿ ಮಾತನಾಡಿ, ಕ್ಷೇತ್ರದ ಸಂಸದರ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.

ಶಾಸಕ ಮಹೇಶ ಟೇಟಗಿನಕಾಯಿ ಮಾತನಾಡಿ, ಸೆಂಟ್ರಲ್ ಕ್ಷೇತ್ರದಲ್ಲಿ ನಿತ್ಯ ಪ್ರಚಾರ ಸಭೆಗಳನ್ನು ನಡೆಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಸಚಿವ ಪ್ರಹ್ಲಾದ ಜೋಶಿ ಅವರು ಮಾಡಿದ ಕೆಲಸಗಳ ಕುರಿತು ಪೋಸ್ಟ್ ಮಾಡಬೇಕು ಎಂದು ತಿಳಿಸಿದರು.

ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು. ಮೇಯರ್ ವೀಣಾ ಬರದ್ವಾಡ, ದತ್ತಮೂರ್ತಿ ಕುಲಕರ್ಣಿ, ಶಿವು ಮೆಣಸಿನಕಾಯಿ, ನಾರಾಯಣ ಜರತಾರಘರ, ರವಿ ನಾಯಕ, ಅಶೋಕ ವಾಲ್ಮೀಕಿ, ಪಾಲಿಗೆ ಸದಸ್ಯರಾದ ರಾಜಣ್ಣ ಕೊರವಿ, ಮಲ್ಲಿಕಾರ್ಜುನ ಗುಂಡೂರ, ಉಮೇಶ್ ಗೌಡ ಕೌಜಗೇರಿ, ರೂಪಾ ಶೆಟ್ಟಿ, ಚಂದ್ರಿಕಾ ಮೇಸ್ತ್ರಿ, ಮೀನಾಕ್ಷಿ ವಂಟಮುರಿ, ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಮುಖಂಡರಾದ ಸಿದ್ದು ಮೊಗಲಿಶೆಟ್ಟರ,ಈಶ್ವರಗೌಡ ಪಾಟೀಲ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net