ಬಿಜೆಪಿ ನಗರ ಸಮಿತಿಯಿಂದ ತುಂಗಾ ನದಿಗೆ ಬಾಗಿನ

bjp city committee
Published on

ಶಿವಮೊಗ್ಗ: ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಶುಕ್ರವಾರ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ಶಿವಮೊಗ್ಗ ನಗರ ಸಮಿತಿ ಪದಾಧಿಕಾರಿಗಳು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಬಿಜೆಪಿ ಮುಖಂಡರು ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗೆಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಎಸ್.ಎನ್.ಚನ್ನಬಸಪ್ಪ, ದೇವಾನುದೇವತೆಗಳ ಅನುಗ್ರಹದಿಂದ ಜಿಲ್ಲೆ ಹಾಗೂ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ತುಂಗಾ ನದಿ ರಾಜ್ಯದ ಕೃಷಿ, ಕುಡಿಯುವ ನೀರು ಮತ್ತು ಪರಿಸರ ಸಮತೋಲನದ ಪ್ರಮುಖ ಮೂಲವಾಗಿದ್ದು, ತುಂಗೆಗೆ ಬಾಗಿನ ಅರ್ಪಿಸುವ ಸಂಸ್ಕೃತಿ ನಮ್ಮ ನಾಡಿನ ಪರಂಪರೆಯ ಪ್ರತಿಬಿಂಬವಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಪ್ರಧಾನ ಕಾರ್ಯದರ್ಶಿ ಎಂ.ಬಿ.ಹರಿಕೃಷ್ಣ, ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಎನ್.ಜೆ.ನಾಗರಾಜ, ಎಸ್.ಜ್ಞಾನೇಶ್ವರ್, ಸುರೇಖಾ ಮುರಳೀಧರ್, ಎಸ್.ಶಿವಕುಮಾರ್, ಪ್ರಭಾಕರ್, ಶಾಂತಾ ಸುರೇಂದ್ರ, ದೀನದಯಾಳ್, ಶಶಿಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net