ಸಂವಿಧಾನ ಬದಲಿಸುತ್ತಾರೆಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕ್ರಮ ವಹಿಸಿ: ಜಿಲ್ಲಾಧಿಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ದೂರು

BJP complains to the district collector Mandya
Published on

ಮಂಡ್ಯ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸುವುದಾಗಿ ಕಾಂಗ್ರೆಸ್ ಪಕ್ಷದವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ದೂರು ನೀಡಿದರು.

ಕಾಂಗ್ರೆಸ್ ನಡೆ ಶೋಷಿತರನ್ನು ಒಡೆದಾಳುವ ಮತ ರಾಜಕಾರಣದ ಹುನ್ನಾರ ಅಡಗಿದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ದೇಶದಲ್ಲಿ ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವೇ ಇಲ್ಲ ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಸಂವಿಧಾನ ಬದಲಾವಣೆ ವಿಷಯವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ ಎಂದರು.

ಕಾಂಗ್ರೆಸ್ ಉರಿಯುತ್ತಿರುವ ಮನೆ ದಲಿತರು ಎಂದೂ ಕೂಡ ದಲಿತರು ಆ ಮನೆಯ ಬಳಿ ಹೋಗಬೇಡಿ ಎಂದೂ ಬಾಬಾಸಾಹೇಬರು ದಲಿತರಿಗೆ ಕರೆ ಕೊಟ್ಟಿದ್ದರು. ಕಾಂಗ್ರೆಸ್ ಪಕ್ಷದ ಚುನಾವಣಾ ಪುಚಾರದ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸೇವಿಧಾನವನ್ನು ಬದಲಾಯಿಸುತ್ತಾರೆ ಎಂದು ಅಪಪ್ರಚಾರ ಮಾಡುವ ಮೂಲಕ ಜನರಲ್ಲಿ ಭಯವನ್ನು ಭಿತ್ತುತ್ತಿದೆ. ಜಿಲ್ಲೆಯಲ್ಲಿ ಕೆಲ ಸ್ವಘೋಷಿತ ಸಂಘಟನೆಗಳು ಕರಪತ್ರ ಹಂಚುತ್ತಿದ್ದು, ಸಾರ್ವಜನಿಕರಲ್ಲಿ ಅಪಪ್ರಚಾರದ ಮೂಲಕ ಗೊಂದಲ ಉಂಟುಮಾಡುತ್ತಿದ್ದು, ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ತಕ್ಷಣ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮುಖಂಡರಾದ ನಾಗಾನಂದ್, ಜ್ಯೋತಿ, ಮಾದರಾಜ ಅರಸ್, ಟಿ.ಎಸ್.ವಿವೇಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net