ಬಿಜೆಪಿಯಿಂದ ಕಾಂಗ್ರೆಸ್ ಯೋಜನೆ ನಕಲು

kkl
Published on

ಕಾರ್ಕಳ: ಕರ್ನಾಟಕ ವಾಡೆಲ್ ಯೋಜನೆಗಳನ್ನು ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಬದಲಿಸಿಕೊಂಡಿದ್ದಾರೆ. ಕಾಂಗ್ರೆಸ್ ಬಡವರು, ಮಹಿಳೆಯರು, ದೀನ ದಲಿತರ ಬಗ್ಗೆ ಯೋಚಿಸುತ್ತದೆ. ರಾಜ್ಯದ ಗ್ಯಾರಂಟಿ ಯೋಜನೆ ಟೀಕಿಸುತ್ತಿದ್ದ ಬಿಜೆಪಿ ಇಂದು ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ವಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ತಾಲೂಕು ಆಶ್ರಯದಲ್ಲಿ ಕಾರ್ಕಳದ ಮಂಜುನಾಥ್ ಪೈ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಕಾರ್ಕಳ ಪುರಸಭೆ ಹಾಗೂ ಕುಕ್ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ಯಾರಂಟಿ ಸವಾವೇಶ ಹಾಗೂ ಗ್ಯಾರಂಟಿ ಅದಾಲತ್ ಕಾರ್ಯಕ್ರಮದಲ್ಲಿ ವಾತನಾಡಿದರು.

ರಾಜ್ಯದ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆ ಹಣ ಸಂದಾಯವಾಗುತ್ತಿದೆ. ಆದರೆ, ಜಿಎಸ್‌ಟಿ, ಆದಾಯ ತೆರಿಗೆ ಸಮಸ್ಯೆಯಿಂದ ಸುವಾರು ಎರಡು ಲಕ್ಷ ಮಹಿಳೆಯರಿಗೆ ಹಣ ಸಂದಾಯವಾಗುತ್ತಿಲ್ಲ. 50 ಸಾವಿರ ಮಹಿಳೆಯರಿಗಿದ್ದ ಜಿಎಸ್‌ಟಿ ಸಮಸ್ಯೆ ಸರಿಪಡಿಸಲಾಗಿದೆ. ಉಳಿದ ಒಂದೂವರೆ ಲಕ್ಷ ಮಹಿಳೆಯರಿಗೆ ಇರುವ ಸಮಸ್ಯೆ ಬಗೆಹರಿಸಿ ಹಣ ಸಂದಾಯವಾಗುವಂತೆ ನೋಡಿಕೊಳ್ಳಲಾಗುವುದು. ಇಡೀ ವಿಶ್ವವೇ ಭಾರತದ ಕಡೆ ತಿರುಗುವಂತೆ ವಾಡಿದ್ದು ಕಾಂಗ್ರೆಸ್ ಪಕ್ಷದ ಯೋಜನೆಗಳು. ಒಂದು ಕಾಲದಲ್ಲಿ ಊರುಗಳಲ್ಲಿ ಬಸ್, ಆಸ್ಪತ್ರೆಗಳು ಇರಲಿಲ್ಲ, ಆದರೆ ಇಂದು ಮನೆ ಮನೆಗಳಲ್ಲಿ ಎರಡ್ಮೂರು ಕಾರುಗಳಿವೆ. ಇದು ಕಾಂಗ್ರೆಸ್ ಪಕ್ಷ ಬಡವರ ಬಗ್ಗೆ ತೆಗೆದುಕೊಂಡ ದಿಟ್ಟ ನಿರ್ಧಾರಗಳೇ ಕಾರಣ ಎಂದರು.

ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಉದಯ್ ಶೆಟ್ಟಿ ಮುನಿಯಾಲು, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೀಶ ದೇವಾಡಿಗ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಕಾರ್ಕಳ ತಹಸೀಲ್ದಾರ್ ಪ್ರದೀಪ್ ಆರ್., ಇಒ ಪ್ರಶಾಂತ್ ರಾವ್, ಕುಕ್ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ, ಲೀನಾ ಬ್ರಿಟ್ಟೋ, ಪ್ರದೀಪ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net