ಡಿಕೆಶಿ ವಿರುದ್ಧ ಸಿಬಿಐ ತನಿಖೆ ಪ್ರಕರಣ ವಾಪಸ್: ರಾಜ್ಯಸರ್ಕಾರದ ವಿರುದ್ಧ ಬಿಜೆಪಿ ಟೀಕೆ

Mandya BJP spokesperson criticized the state Congress government
Published on

ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದು ಸರಿಯಲ್ಲ. ಇದು ರಾಜ್ಯದ ಜನರಿಗೆ ಮಾಡಿರುವ ದ್ರೋಹವಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕರ ಅಸ್ತಿತ್ವಕ್ಕೆ ಕುಂದು ಬಂದ ಸಂದರ್ಭದಲ್ಲಿ ಇಂತಹ ದ್ವಂದ್ವ ನಿಲುವುಗಳು ಪ್ರಕಟ ಆಗುತ್ತಿರುತ್ತವೆ. ಡಿ.ಕೆ.ಶಿವಕುಮಾರ್ ಪರವಾಗಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿರುವುದು ಕಾನೂನಿನ ಮೇಲೆ ಗೌರವ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಐಟಿ ದಾಳಿ ಆದಾಗ ರಾಜ್ಯ ಮತ್ತು ಬೇರೆ ಬೇರೆ ಭಾಗಗಳಲ್ಲಿ ಸಾಕಷ್ಟು ಹಣ ಪತ್ತೆಯಾಗಿತ್ತು. ಈ ಬಗೆ ಇನ್ನೂ ಐಟಿ ಇಲಾಖೆ ತನಿಖೆ ನಡೆಸುತ್ತಿದೆ. ಇದರ ನಡುವೆಯೂ ಸಿಬಿಐ ಪ್ರಕರಣವನ್ನು ವಾಪಸ್ ಪಡೆದಿರುವುದು ಕಾಂಗ್ರೆಸ್ ದೇಶದಲ್ಲಿ ತನಗಿಷ್ಟ ಬಂದಂತೆ ಆಡಳಿತ ನಡೆಸುತ್ತದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದಂತಿದೆ ಎಂದು ಪ್ರಕಟಣೆಯಲ್ಲಿ ಕಿಡಿಕಾರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net