ಜಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

h20-bjp
module: a; hw-remosaic: 0; touch: (0.49583334, 0.49583334); modeInfo: ; sceneMode: Night; cct_value: 0; AI_Scene: (-1, -1); aec_lux: 49.0; hist255: 0.0; hist252~255: 0.0; hist0~25: 0.0;
Published on

ಹುಬ್ಬಳ್ಳಿ: ವಸತಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ಖಂಡಿಸಿ ಬಿಜೆಪಿ ಎಸ್‌ಸಿ ಮೋರ್ಚಾ ನೇತೃತ್ವದಲ್ಲಿ ಮಂಗಳವಾರ ಇಲ್ಲಿಯ ಉಪನಗರ ಠಾಣೆ ಮುಂದೆ ಪ್ರತಿಭಟನೆ ನಡೆಯಿತು.
ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ಜಮೀರ್ ಅಹ್ಮದ್ ಅವರು ಕೋಮುಗಳ ಮಧ್ಯೆ ದ್ವೇಷ ಭಾವನೆ ಬಿತ್ತಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಮತ್ತು ದುರುದ್ದೇಶ ಪೂರ್ವಕವಾದ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ ಕೊಟ್ಟ ದೂರು ಸ್ವೀಕರಿಸಿದ ಎಸಿಪಿ ಶಿವಪ್ರಕಾಶ ನಾಯಕ್, ನಿಮ್ಮ ಈ ದೂರನ್ನು ನಮ್ಮ ಇಲಾಖೆಯ ಮುಖ್ಯ ಕಚೇರಿಗೆ ರವಾನಿಸುವುದಾಗಿ ಭರವಸೆ ನೀಡಿದರು.
ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ಬೀರಪ್ಪ ಖಂಡೇಕರ, ಪ್ರಮುಖರಾದ ದತ್ತಮೂರ್ತಿ ಕುಲಕರ್ಣಿ, ಈಶ್ವರಗೌಡ ಪಾಟೀಲ, ಚಂದ್ರಶೇಖರ ಗೋಕಾಕ, ಪರಶುರಾಮ ಪೂಜಾರಿ, ಪ್ರಕಾಶ ಬುರಬುರೆ, ವಿಜಯ ಗುಂಟ್ರಾಳ, ಪ್ರಭು ನವಲಗುಂದಮಠ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net