ಕೋಮು ಗಲಭೆಗಳಿಗೆ ಬಿಜೆಪಿಯೇ ನೇರ ಹೊಣೆ

ishwar khandre
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ರಾಜ್ಯದಲ್ಲಿ ಆಗುವ ಎಲ್ಲ ಕೋಮು ಗಲಭೆಗಳಿಗೆ ಬಿಜೆಪಿಯೇ ನೇರ ಹೊಣೆ ಹೊತ್ತುಕೊಳ್ಳಬೇಕಾಗುತ್ತದೆ. ಕೋಮು ಗಲಭೆಗಳನ್ನು ಅವರೇ ಮಾಡುವಂಥದ್ದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.

ಹುಬ್ಬಳ್ಳಿಯಲ್ಲಿರುವ ಸರ್ ಸಿದ್ದಪ್ಪ ಕಂಬಳಿ ಅವರ ನಿವಾಸಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಭಾವನೆಗಳನ್ನು ಹೇಗೆ ಕೆರಳಿಸಬೇಕು ಎಂಬುದು ಬಿಜೆಪಿಯವರಿಗೆ ಗೊತ್ತಿದೆ. ಜನರ ಬಳಿ ಹೋಗಲು ಅವರಲ್ಲಿ ಯಾವುದೇ ಸಾಧನೆ ಇಲ್ಲ. ರಾಜ್ಯ ಸರ್ಕಾರ ಒಳ್ಳೆಯ ಆಡಳಿತ ನೀಡುತ್ತಿರುವುದನ್ನು ಸಹಿಸಲು ಆಗದೆ ಹೊಟ್ಟೆಕಿಚ್ಚಿನಿಂದ ್ಜತಿ- ಜಾತಿ, ಧರ್ಮ-ಧರ್ಮಗಳ ನಡುವೆ ವೈಷಮ್ಯ, ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜಭವನದ ಗೌಪ್ಯ ಮಾಹಿತಿಗಳು ಸೋರಿಕೆಯಾಗಿರುವ ಬಗ್ಗೆ ರಾಜ್ಯಪಾಲರೇ ಉತ್ತರ ಕೊಡಬೇಕು. ರಾಜಭವನದ ಅಧಿಕಾರಿಗಳು ರಾಜ್ಯಪಾಲರ ನಿಯಂತ್ರಣದಲ್ಲಿ ಇರುತ್ತಾರೆ ಎಂದು ಹೇಳಿದರು.

ರಾಜ್ಯದಲ್ಲಿ ದೊಡ್ಡ ಪ್ರಮಾಣದ ಅರಣ್ಯ ಅತಿಕ್ರಮಣವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. 3 ಎಕರೆಗಿಂತ ಕಡಿಮೆ ಅರಣ್ಯ ಪ್ರದೇಶ ಅತಿಕ್ರಮಣ ಮಾಡಿರುವ ಬಡವರು, ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ನಾವು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಯಾರು 3 ಎಕರೆಗಿಂತ ಹೆಚ್ಚು ಅರಣ್ಯ ಪ್ರದೇಶ ಅತಿಕ್ರಮಣ ಹಾಗೂ ನಾಶ ಮಾಡಿದ್ದಾರೆಯೋ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲೇ ಬೇಕಾಗುತ್ತದೆ. ಪರಿಸರ ಮತ್ತು ಅರಣ್ಯ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದರು.

ತಿರುಪತಿ ಲಡ್ಡು ವಿಚಾರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಜಗನ್​ವೋಹನ್ ರೆಡ್ಡಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ಕುರಿತು ಸತ್ಯಾಸತ್ಯತೆ ನನಗೆ ಗೊತ್ತಿಲ್ಲ. ಹಾಗಾಗಿ ಈ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ರಾಜಕಾರಣದಲ್ಲಿ ಇರುವವರು ಜನರ ಸೇವೆ ಮಾಡಬೇಕು. ಅದನ್ನು ಬಿಟ್ಟು ಶೋಷಣೆ ಮಾಡುವುದು, ಬ್ಲ್ಯಾಕ್​ವೆುೕಲ್ ಮಾಡುವುದು ಜನರಿಗೆ ಮಾಡುವ ಮಹಾದ್ರೋಹವಾಗುತ್ತದೆ. ಶಾಸಕ ಮುನಿರತ್ನ ಅವರಂಥವರು ರಾಜಕೀಯ ಜೀವನದಲ್ಲಿ ಇರಲು ಲಾಯಕ್ ಇಲ್ಲ. ಅವರು ಹಿಂದೆ ನಮ್ಮ ಪಕ್ಷದಲ್ಲಿ ಇದ್ದರು ಎಂಬುದು ಮುಖ್ಯವಲ್ಲ. ಯಾವುದೇ ಪಕ್ಷದಲ್ಲಿದ್ದರೂ ವ್ಯಕ್ತಿಯಲ್ಲಿ ಮಾನವೀಯ ಮೌಲ್ಯ, ನೈತಿಕ ಗುಣಗಳು ಇರಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net