ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿಗೆ ಸನ್ಮಾನ

gan (23)
Published on

ಕುಂದಾಪುರ: ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಕುಂದಾಪುರ ಮಂಡಲಕ್ಕೆ ಶುಕ್ರವಾರ ಭೇಟಿ ನೀಡಿದರು.

ಶಾಸಕ ಎ.ಕಿರಣ್‌ಕುವಾರ್ ಕೊಡ್ಗಿ ಹಾಗೂ ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಕುತ್ಯಾರು ನವೀನ್ ಶೆಟ್ಟಿ ಅವರನ್ನು ಕುಂದಾಪುರ ಬಿಜೆಪಿಯ ವತಿಯಿಂದ ಸನ್ಮಾನಿಸಿದರು.

ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ವಿಕಸಿತ ಭಾರತ ಅಭಿಯಾನದ ಜಿಲ್ಲಾ ಸಂಚಾಲಕ ರಾಜೇಶ್ ಕಾವೇರಿ, ಕುಂದಾಪುರ ಮಂಡಲ ಪ್ರಭಾರಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಜಿಲ್ಲೆ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಕುಂದಾಪುರ ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು. ಸುಧೀರ್ ಕೆ.ಎಸ್. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net