ಒಳಮೀಸಲಾತಿ ತುರ್ತಾಗಿ ಜಾರಿಗೊಳಿಸಲಿ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ಕೃಷ್ಣ ಒತ್ತಾಯ

BJP District Vice President Press Conference Mandya
Published on

ಮಂಡ್ಯ: ಸುಪ್ರೀಂಕೋರ್ಟ್ ನ್ಯಾಯಾಲಯದ ಆದೇಶದಂತೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಆಯಾ ರಾಜ್ಯಗಳಲ್ಲಿಯೇ ಜಾರಿ ಮಾಡಬಹುದು ಎಂದಿರುವುದನ್ನು ತುರ್ತಾಗಿ ರಾಜ್ಯ ಸರ್ಕಾರ ಗಮನಹರಿಸಿ ಜಾರಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ಕೃಷ್ಣ ಒತ್ತಾಯಿಸಿದರು.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ನೇತೃತ್ವದಲ್ಲಿ ಏಳು ಜನ ನ್ಯಾಯಾಧೀಶರು ಒಳ ಮೀಸಲಾತಿ ನೀಡುವ ಸಂಬಂಧ ಆಯಾ ರಾಜ್ಯಗಳಿಗೆ ಅಧಿಕಾರವಿದೆ ಎಂದು ತಿಳಿಸಿದ್ದಾರೆ. ಹಾಗಾಗಿ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ತುಳಿತಕ್ಕೆ ಒಳಗಾದವರು, ಶೋಷಿತ ಸಮಾಜಗಳ ಏಳಿಗೆಗಾಗಿ ದಲಿತ ಸಂಘರ್ಷ ಸಮಿತಿ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಆದಿಜಾಂಬವ ಸಂಘ ಸೇರಿದಂತೆ ಹಲವು ಸಂಘಟನೆಗಳು ಹಲವಾರು ವರ್ಷಗಳಿಂದ ಹೋರಾಟ ನಡೆಸಿದ ಫಲವಾಗಿ ಬಂದಿರುವ ನ್ಯಾಯಾಲಯದ ಆದೇಶ ನಮ್ಮ ಹೋರಾಟಕ್ಕೆ ಸಂದ ಜಯ. ನ್ಯಾಯಮೂರ್ತಿ ಸದಾಶಿವಯ್ಯ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ತರಿಸಿಕೊಂಡಿದ್ದರು. ಆದರೆ ಆ ವರದಿಯನ್ನು ಯಾರು ಪರಿಗಣಿಸಲಿಲ್ಲ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಧವಸ್ವಾಮಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ಪಡೆದು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದರು. ಇತರರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯ ಕೂಲಂಕುಶವಾಗಿ ಪರಿಶೀಲಿಸಿ ಈ ಆದೇಶ ನೀಡಿರುವುದು ಉತ್ತಮ ಬೆಳವಣಿಗೆ ಎಂದರು.

ಮುಖಂಡರಾದ ಕನಲಿ ಚನ್ನಪ್ಪ, ಗವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net