ಬಿಜೆಪಿ ಜಿಲ್ಲಾ ಮಹಿಳಾ ಸಮಾವೇಶ ಇಂದು

PHOTO-1-05
Published on

ಚಿತ್ರದುರ್ಗ: ಚಂದ್ರವಳ್ಳಿ ಮೈದಾನದಲ್ಲಿ ಫೆ.25ರ ಬೆಳಗ್ಗೆ 11ಕ್ಕೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆದಿರುವ ಮಹಿಳಾ ಫಲಾನುಭವಿಗಳು, ಪ್ರತಿ ಮಂಡಲ ಒಳಗೊಂಡು 10 ಸಾವಿರ ಸ್ತ್ರೀಯರು ಭಾಗವಹಿಸುವ ನಿರೀಕ್ಷೆ ಇದೆ. ಸಾಂಕೇತಿಕವಾಗಿ ಕೆಲವರಿಗೆ ಸೌಲಭ್ಯ ವಿತರಿಸಲಾಗುವುದು ಎಂದರು.

ರಾಷ್ಟ್ರೀಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವಿಜಯಲಕ್ಷ್ಮ್ಮಿ, ಸಮಾವೇಶದ ಸಂಚಾಲಕ ಬಿ.ವೈ.ವಿಜಯೇಂದ್ರ, ನಟಿ ತಾರಾ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಕೊಡುಗೆ ಜನರಿಗೆ ತಿಳಿಸಲು ಜಿಲ್ಲಾಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮಾ.4ರಂದು ಚಿತ್ರದುರ್ಗಕ್ಕೆ ಸಿಎಂ ಬರಲಿದ್ದಾರೆ. ಅದೇ ತಿಂಗಳು ಪ್ರಧಾನಿ ಕೂಡ ಭೇಟಿ ನೀಡಲಿದ್ದಾರೆ. ನಿರಂತರವಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದ ಸಮಾವೇಶಗಳು ನಡೆಯಲಿವೆ ಎಂದು ಹೇಳಿದರು.

ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಚಂದ್ರಿಕಾ, ಪ್ರಧಾನ ಕಾರ್ಯದರ್ಶಿ ನರೇಂದ್ರ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಡಾ.ಸಿದ್ಧಾರ್ಥ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶೈಲಜಾರೆಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net