ಬಿಜೆಪಿ ಚುನಾವಣೆ ನಿರ್ವಹಣಾ ಸಮಿತಿ ಸಭೆ

New bjp election news
Published on

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭೆ ಕ್ಷೇತ್ರ ಬಿಜೆಪಿ ವತಿಯಿಂದ ಧಾರವಾಡ ಲೋಕಸಭೆ ಚುನಾವಣೆಯ ನಿರ್ವಹಣಾ ಸಮಿತಿ ಸಭೆಯನ್ನು ಇಲ್ಲಿನ ಅರವಿಂದ ನಗರದ ಪಕ್ಷದ ಕಚೇರಿಯಲ್ಲಿ ಸೋಮವಾರ ಆಯೋಜಿಸಲಾಗಿತ್ತು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಚುನಾವಣೆಯ ನಿರ್ವಹಣೆ ಸಮಿತಿಯ ಎಲ್ಲ 37 ವಿಭಾಗಗಳ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಲಾಗಿದೆ. ಸಣ್ಣ ಪುಟ್ಟ ಲೋಪದೋಷಗಳು ಆಗದಂತೆ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು.

ಧಾರವಾಡ ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ ಪ್ರಾಸ್ತ್ತಾವಿಕವಾಗಿ ಮಾತನಾಡಿದರು. ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ಮೇಯರ್ ವೀಣಾ ಬರದ್ವಾಡ, ದತ್ತಮೂರ್ತಿ ಕುಲಕರ್ಣಿ, ಅಶೋಕ ವಾಲ್ಮೀಕಿ, ಪಾಲಿಕೆ ಸದಸ್ಯರಾದ ಉಮೇಶ ಕೌಜಿಗೆರೆ, ಮಲ್ಲಿಕಾರ್ಜುನ ಗುಂಡೂರು, ರಾಜಣ್ಣ ಕೊರವಿ, ಬೀರಪ್ಪ ಖಂಡೇಕಾರ, ಉಮಾ ಮುಕುಂದ, ಚಂದ್ರಿಕಾ ಮೇಸ್ತ್ರಿ, ರೂಪಾ ಶೆಟ್ಟಿ, ಮೀನಾಕ್ಷಿ ವಂಟಮುರಿ, ಜಿಲ್ಲಾ ವಕ್ತಾರ ರವಿ ನಾಯಕ, ಸಿದ್ದು ಮೋಗಲಿಶೆಟ್ಟರ, ಅಕ್ಕಮಹಾದೇವಿ ಹೆಗಡೆ ಹಾಗೂ ಇತರರು ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net