ಚುನಾವಣಾ ಪ್ರಣಾಳಿಕೆ ಭರವಸೆ ಈಡೇರಿಸಲು ಬದ್ಧ: ಶಾಸಕ ಕೆ. ರಘುಪತಿ ಭಟ್

raghupati bhat
Published on

ಉಡುಪಿ: ಪಕ್ಷದ ಸಂಘಟನೆ ಬೂತ್ ಮಟ್ಟದಲ್ಲಿ ಪ್ರಾಬಲ್ಯ ಹೊಂದಿದಷ್ಟು ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳ ಸಂಪರ್ಕ ನಿಕಟವಾಗುತ್ತದೆ. ಚುನಾವಣೆಯ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲು ತಾವು ಹಾಗು ತಮ್ಮ ನೂತನವಾಗಿ ಅಸ್ತಿತ್ವಕ್ಕೆ ಬಂದ ನಗರಸಭೆ ಬದ್ಧ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ನಗರ ಬಿಜೆಪಿ ಆಶ್ರಯದಲ್ಲಿ ನಡೆದ ಪ್ರಥಮ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಉದ್ಘಾಟಿಸಿದರು. ಶಾಸಕ, ಉಡುಪಿ ಜಿಲ್ಲಾ ಪ್ರಭಾರಿ ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಕಾರ್ಯದರ್ಶಿ ದಯಶಿನಿ ಪಂದುಬೆಟ್ಟು, ಲಕ್ಷ್ಮೀ ಪಿ. ಶೆಟ್ಟಿ ಕಿನ್ನಿಮೂಲ್ಕಿ ವರದಿ ವಾಚಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ ಸಂಘಟನಾತ್ಮಕ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಜಿಪಂ ಅಧ್ಯಕ್ಷ ದಿನಕರ್ ಬಾಬು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಉಪಸ್ಥಿತರಿದ್ದರು.

ನಗರಸಭಾ ಸದಸ್ಯ ಯೋಗೀಶ್ ಸಾಲಿಯಾನ್ ಹಾಗೂ ನಗರ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜುನೈದ್ ವಿವಿಧ ಪ್ರಸ್ತಾವನೆಗಳಿಗೆ ಅನುಮೋದನೆ ಪಡೆದುಕೊಂಡರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಜಿಲ್ಲಾ ವಕ್ತಾರ ಗಿರೀಶ್ ಅಂಚನ್ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net