

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಪ್ರತಿಮೆಗೆ ಸಂಬಂಧಿಸಿ ಸುಳ್ಳುಸುದ್ದಿ ಹರಡಲಾಗಿದೆ ಎಂದು ಆರೋಪಿಸಿ ಕಾರ್ಕಳ ಬಿಜೆಪಿ ವತಿಯಿಂದ ಸಹಾಯಕ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಯಿತು.
ಶಾಸಕ ವಿ.ಸುನೀಲ್‌ಕುವಾರ್ ಅವರ ಪರಿಕಲ್ಪನೆಯಲ್ಲಿ ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ನಿರ್ವಾಣಗೊಂಡ ಪರಶುರಾಮ ಥೀಂ ಪಾರ್ಕ್‌ಗೆ ಸಂಬಂಧಿಸಿ ಕಾರ್ಕಳ ಕಾಂಗ್ರೆಸ್ ಮುಖಂಡರು ಹಾಗೂ ಬೆಂಬಲಿಗರು ಸುದ್ದಿಗೋಷ್ಠಿಗಳು, ಸಭೆ ಸವಾರಂಭಗಳು ಮತ್ತು ಸಾವಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ವಾಡಿದ್ದಾರೆ. ಈ ಮೂಲಕ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಲಾಗಿದೆ. ಅಪಪ್ರಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಕಳ ಮಂಡಲದ ಅಧ್ಯಕ್ಷ ನವೀನ್ ನಾಯಕ್ ಒತ್ತಾಯಿಸಿದ್ದಾರೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.