

ಹುಬ್ಬಳ್ಳಿ: ಇಲ್ಲಿಯ ಅರವಿಂದನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಭಾನುವಾರ ಪಕ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು.
ಪಕ್ಷದ ಸಾಮಾನ್ಯ ಕಾರ್ಯಕರ್ತ, ಚರ್ಮಶಿಲ್ಪಿ ಮಲ್ಲೇಶ ಬೆಟಗೇರಿ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಪಂಡಿತ ದೀನದಯಾಳ ಉಪಾಧ್ಯಾಯ, ಶಾಮ ಪ್ರಸಾದ್ ಮುಖರ್ಜಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಏಪ್ರಿಲ್ 6, 1980ರಲ್ಲಿ ಜನ ಸಂಘದಿಂದ ಬಿಜೆಪಿಗೆ ಪಕ್ಷವನ್ನು ವಿಲೀನ ಮಾಡಿದರು. ಮುಂದೆ ಲಕ್ಷಾಂತರ ಕಾರ್ಯಕರ್ತರು ಯಾವುದೇ ಫಲಾಪೇಕ್ಷೆ ಇಲ್ಲದೆ ಹಗಲಿರುಳು ಪಕ್ಷ ಕಟ್ಟಿದರು ಎಂದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಇತರರು ಮಾತನಾಡಿದರು. ಪಕ್ಷದ 20 ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು.
ಮೇಯರ್ ರಾಮಣ್ಣ ಬಡಿಗೇರ, ಗ್ರಾಮಾಂತರ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಾಜಿ ಶಾಸಕ ಅಶೋಕ ಕಾಟವೆ, ಲಿಂಗರಾಜ ಪಾಟೀಲ್, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ಶಿವು ಮೆಣಸಿನಕಾಯಿ, ಸೆಂಟ್ರಲ್ ಅಧ್ಯಕ್ಷ ರಾಜು ಕಾಳೆ, ಪೂರ್ವ ಕ್ಷೇತ್ರದ ಅಧ್ಯಕ್ಷ ಮಂಜು ಕಾಟ್ಕರ್, ಜಿಲ್ಲಾ ವಕ್ತಾರ ರವಿ ನಾಯಕ, ಕೃಷ್ಣ ಗಂಡಗಾಳೇಕರ, ಸಿದ್ದು ಮೊಗಲಿಶೆಟ್ಟರ್, ರಾಜು ಜರತಾರ್ಘರ್, ಪಾಲಿಕೆ ಸದಸ್ಯರಾದ ರಾಧಾಬಾಯಿ ಸಫಾರೆ, ರೂಪಾ ಶೆಟ್ಟಿ, ಸುನೀತಾ ಮಾಳವದಕರ, ಮೊದಲಾದವರು ಉಪಸ್ಥಿತರಿದ್ದರು.