

ಉಡುಪಿ: ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷ$ವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದು ಕಾರ್ಕಳ ಹಿರಿಯ ವಕೀಲ, ಬಿಜೆಪಿ ಮುಖಂಡ ಎಂ.ಕೆ. ವಿಜಯಕುಮಾರ್ ಹೇಳಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ತುರ್ತು ಪರಿಸ್ಥಿತಿ ವಿರೋಧಿಸಿ ರಚನೆಯಾದ ಜನತಾ ಪಕ್ಷದ ಸರ್ಕಾರ ಪತನಗೊಂಡ ಸಂದರ್ಭದಲ್ಲಿ ಅಂದಿನ ಜನಸಂದ ನಾಯಕರು ನಡೆದುಕೊಂಡ ರೀತಿ ಅದರ್ಶ ರಾಜಕಾರಣಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ವಿಪ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಶಿಲ್ಪಾ ಸುವರ್ಣ ಉಪಸ್ಥಿತರಿದ್ದರು.
ಏ.10ಕ್ಕೆ ಜನಾಕ್ರೋಶ ಯಾತ್ರೆ ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ಹಾಗೂ ಜನವಿರೋಧಿ ನೀತಿ ಖಂಡಿಸಿ ಎ.10ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9.30ಕ್ಕೆ ರಾಜಾಂಗಣ ಪಾರ್ಕಿಂಗ್ ಪ್ರದೇಶದಿಂದ ಜಾಥಾ ಆರಂಭವಾಗಲಿದ್ದು, ಕಲ್ಸಂಕ ಮಾರ್ಗವಾಗಿ ಸಾಗಿ ಕಡಿಯಾಳಿಯಲ್ಲಿ ಸಮಾಪನಗೊಳ್ಳಲಿದೆ. ಬೆಳಗ್ಗೆ ಗಂಟೆ 10.30ಕ್ಕೆ ಜಿಲ್ಲಾ ಕಚೇರಿ ಬಳಿ ಸಭಾ ಕಾರ್ಯಕ್ರಮ ನಡೆಯಲಿದೆ. ಹರೀಶ್ ಪೂಂಜಾ, ಶಾಸಕರು, ಬೆಳ್ತಂಗಡಿ