

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ವಿರೋಧಿಸಿ ರಾಜ್ಯ ಮಟ್ಟದ ಹೋರಾಟಕ್ಕೆ ಅಣಿಯಾಗಿರುವುದಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ನಗರದ ರಾಣಿ ಚನ್ನಮ್ಮ ಸಭಾಭವನದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಮೇ 11 ರಂದು ವಿಜಯಪುರ ನಗರದಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ರಾಷ್ಟ್ರೀಯ ರ‌್ಯಾಲಿ ಎಂಬ ಹೆಸರಿನಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದೆ. ರಾಜ್ಯದ ವಿವಿಧ ಭಾಗಗಳ 5-10 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಜಿಲ್ಲೆಯ ಗ್ರಾಮ ಗ್ರಾಮಗಳಲ್ಲಿ ಯತ್ನಾಳ ಪರ ಹೋರಾಟಕ್ಕೆ ಪ್ರವಾಸ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಜಾಗೃತಿ ಮೂಡಿಸಲಾಗುವುದು. ಆ ಮೂಲಕ ಕೇಂದ್ರ ಬಿಜೆಪಿ ನಾಯಕರ ಗಮನ ಸೆಳೆಯಲಾಗುವುದೆಂದರು.