ಪಕ್ಷ ದ್ರೋಹಿಗಳಿಗೆ ಜನರಿಂದ ತಕ್ಕ ಪಾಠ

IMG-20230417-WA0009.jpg
Published on


ಬೆಳಗಾವಿ: ಸಾಮಾನ್ಯ ಕಾರ್ಯಕರ್ತರ ಕಟ್ಟಿ ಬೆಳಸಿದ ಪಕ್ಷದಲ್ಲಿ ಪ್ರತಿಯೊಬ್ಬರಿಗೂ ಸ್ಥಾನಮಾನಗಳು ದೊರಕುತ್ತಿವೆ. ಆದರೆ, ಕೆಲವರು ಪಕ್ಷದಿಂದ ಎಲ್ಲ ರೀತಿಯ ಅಧಿಕಾರ ಅನುಭವಿಸಿ ಇದೀಗ ಪಕ್ಷ ಬಿಟ್ಟು ಹೋಗಿ ದ್ರೋಹ ಬಗೆಯುತ್ತಿದ್ದಾರೆ. ಈ ಚುನಾವಣೆಯಲ್ಲಿ ಪಕ್ಷ ದ್ರೋಹಿಗಳಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಬಿ.ಝಿರಲಿ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಗೆಲುವು ಸಾಧಿಸುವ ಅಭ್ಯರ್ಥಿಗಳಿಗೆ ವಿಧಾನಸಭೆ ಚುನಾವಣೆಯಲ್ಲಿ  ಪಕ್ಷದ ವರಿಷ್ಠರು ಟಿಕೆಟ್ ನೀಡಿದ್ದಾರೆ. ನಾವೆಲ್ಲಾ ಪಕ್ಷ ಗೆಲುವಿವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
.ಶಾಸಕ ಅಭಯ ಪಾಟೀಲ ಮಾತನಾಡಿ, ಈ ಬಾರಿ ಚುನಾವಣೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗುತ್ತಿದ್ದೇವೆ. ಬಡವರು, ಕಾರ್ಮಿಕರು, ನೇಕಾರರು, ರೈತರು, ವಿದ್ಯಾರ್ಥಿಗಳು, ಯುವ ಸಮುದಾಯ ಸೇರಿದಂತೆ ಎಲ್ಲ ವರ್ಗದ ಜನರು ಬಿಜೆಪಿ ಬೆಂಬಲಿಸುತ್ತಿದ್ದಾರೆ. ಹಾಗಾಗಿ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಹಾಗಾಗಿ ನಾವೆಲ್ಲಾ ಮುಖಂಡರು, ಕಾರ್ಯಕರ್ತರು ಪಕ್ಷ ಗೆಲುವಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net