

-ಕಾರ್ಯಕರ್ತರ ಸಮಸ್ಯೆ ಇತ್ಯರ್ಥಕ್ಕೆ ಮುಖಂಡರು ಯತ್ನ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರಲ್ಲಿ ಉಂಟಾಗಿದ್ದ ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಲ್ಲ ನಾಯಕರು, ಪಕ್ಷದ ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ರಾಮದುರ್ಗ ಕ್ಷೇತ್ರದ ಕೆಲ ಭಾಗದಲ್ಲಿ ಕಾರ್ಯಕರ್ತರ ಸಮಸ್ಯೆ ಉಂಟಾಗಿರುವುದು ನಿಜ. ಆ ಸಮಸ್ಯೆಯನ್ನು ಪರಿಹರಿಸುವ ಕೆಲಸವನ್ನು ಮಾಡಲಾಗಿದೆ. ಬಿಜೆಪಿ ಮುಖಂಡ ಚಿಕ್ಕ ರೇವಣ್ಣ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಅವರ ಪಕ್ಷಕ್ಕೆ ರಾಜೀನಾಮ ಕೊಡುತ್ತಾರೆ ಎಂಬುದು ಸುಳ್ಳು. ಅಭ್ಯರ್ಥಿ ಜಗದೀಶ ಶೆಟ್ಟರ್ ಪರ ಅವರ ಬೆಂಬಲಿಗರು, ಕಾರ್ಯಕರ್ತರು ಒಗ್ಗಟ್ಟಿನಿಂದ ಮತಯಾಚನೆ ಮಾಡುತ್ತಿದ್ದಾರೆ. ಆರೋಗ್ಯದ ಸಮಸ್ಯೆ ಹಿನ್ನೆಲೆ ಪ್ರಚಾರ ದೂರ ಉಳಿದಿದ್ದಾರೆ ಎಂದರು.