

ಬೆಳಗಾವಿ:ಬೆಳಗಾವಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ವೇಗ ನೀಡಿರುವ ಜಿಲ್ಲಾ ಬಿಜೆಪಿ ನಾಯಕರು ಮಂಗಳವಾರ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಉತ್ತರಮಂಡಲ ಬೂತ್ ಮಟ್ಟದ ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರನ್ನು ಸೇರಿಸುವ ಮೂಲಕ ನಾರಿ ಶಕ್ತಿ ಪ್ರದರ್ಶಿಸಿದರು.
ಅಭ್ಯರ್ಥಿ ಜಗದೀಶ್ ಶೆಟ್ಟರ್, ಸಂಸದೆ ಮಂಗಲ ಅಂಗಡಿ, ಎಂಎಲ್ ಸಿ ಹಣಮಂತ ನಿರಾಣಿ, ಮಾಜಿ ಎಂಎಲ್ ಸಿ ಮಹಾಂತೇಶ ಕವಟಗಿಮಠ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ ಸಮಾವೇಶಕ್ಕೆ ಚಾಲನ ನೀಡಿದರು.