ಬೆಳಗಾವಿಗೆ ಬಂದಿಳಿದ ಪ್ರಧಾನಿ ನರೇಂದ್ರ ‌ಮೋದಿ

IMG-20240427-WA0021.jpg
Published on

ಬೆಳಗಾವಿ: ಲೋಕಸಭೆ ಚುನಾವಣೆ ಪ್ರಚಾರದ ಕಾರ್ಯ ನಿಮಿತ್ತ ಬೆಳಗಾವಿ ವಿಮಾನ‌ನಿಲ್ದಾಣಕ್ಕೆ ಆಗಮಿಸಿದ ‌ಪ್ರಧಾನಿ‌ನರೇಂದ್ರ ಮೋದಿ ಅವರನ್ನು ಅಭ್ಯರ್ಥಿ ಜಗದೀಶ್ ಶೆಟ್ಟರ್, ವಿವಿಧ ಸಮುದಾಯದ ಮುಖಂಡರು ‌ಬರಮಾಡಿಕೊಂಡರು.
ನಾಳೆ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳ ಸಂತಸ ಮುಗಿಲು ಮುಟ್ಟಿತ್ತು.
ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾನುವಾರ ಹಾಗೂ ಸೋಮವಾರ ರಾಜ್ಯದಲ್ಲಿ ನರೇಂದ್ರ ಮೋದಿ ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.
ಕಾಕತಿಯಲ್ಲಿ ಜೊಲ್ಲೆ ಗ್ರೂಪ್‌ನಿಂದ ನಿರ್ಮಾಣಗೊಂಡಿರುವ ಐಟಿಸಿ ವೆಲ್ ಕಮ್ ಹೋಟೆಲ್‌ನಲ್ಲಿ ಮೋದಿ ವಾಸ್ತವ್ಯ ಹೂಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net