

ಬೆಳಗಾವಿ: ನಗರದ ಧರ್ಮನಾಥ ಭವನದ ಹತ್ತಿರ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನೂತನ ಕಾರ್ಯಾಲಯವನ್ನು ಸಂಸದ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ನೂತನವಾದ ಕಾರ್ಯಾಲಯವು ನಮ್ಮ ಭಾಜಪ ಕಾರ್ಯಕರ್ತರಿಗೆ ಸಭೆ ಹಾಗೂ ಪಕ್ಷದ ಕಾರ್ಯಕ್ರಮವನ್ನು ಮಾಡಲು ಅನುಕೂಲಕರವಾಗಲಿದೆ ಈ ಕಾರ್ಯಾಲಯಕ್ಕೆ ವಾರಕ್ಕೊಮ್ಮೆ ಒಂದು ದಿನ ನಾನು ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸುತ್ತೇನೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಪ್ರಕರಣದಲ್ಲಿ ಗೌರವಾನ್ವಿತ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯನವರು ಬಹಳ ನೈತಿಕವಾಗಿ ಪರಿಗಣಿಸಿ ರಾಜೀನಾಮೆ ಕೊಡಬೇಕು ಎಂದು ಹೇಳಿದರು.
ನಂತರ ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ ಮಾತನಾಡಿ ಮುಂಬರುವ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು. ನ
ಹಿಂದೆ ಇಂಥದ್ದೇ ಪ್ರಕರಣದಲ್ಲಿ ಸಿದ್ದರಾಮ್ಯನವರು ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜೀನಾಮೆಗೆ ಒತ್ತಾಯ ಮಾಡಿದ್ದು ಕೂಡ ಸತ್ಯ. 4 ದಶಕಗಳ ಕಾಲ ಸಾರ್ವಜನಿಕ ಜೀವನ ಮಾಡಿದ ಸಿದ್ದರಾಮ್ಯನವರು, ತಾವು ಪರಿಶುದ್ಧರು ಎಂದು ತಮಗೆ ತಾವೇ ಅಫಿಡವಿಟ್ ಹಾಕಿಕೊಂಡು ಅನೇಕ ಸಂದರ್ಭಗಳಲ್ಲಿ ಅವರ ಮೇಲೆ ಬಂದ ಎಲ್ಲ ಆರೋಪಗಳನ್ನು ಲೋಕಾಯುಕ್ತ ಮುಂದಿದ್ದ 106 ಕೇಸುಗಳಲ್ಲಿ 65 ಪ್ರಕರಣಗಳಲ್ಲಿ ಅವರೇ ಅವುಗಳಿಗೆ ಬಿ ರಿಪೋರ್ಟ್ ಹಾಕಿಸಿಕೊಂಡಿದ್ದರು. ಚಳವಳಿ ರೂಪದಲ್ಲಿ ನಡೆಯುತ್ತಿದ್ದ ಲೋಕಾಯುಕ್ತವನ್ನು (ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ನ್ಯಾ. ವೆಂಕಟಾಚಲಯ್ಯ ಮೊದಲಾದವರ ನೇತೃತ್ವ) ಆ ಸಂಸ್ಥೆಯನ್ನೇ ಮುಚ್ಚಿಸಲು ಕಾರಣರಾಗಿದ್ದರು ಎಂದು ಆರೋಪಿಸಿದರು
ಮಾಜಿ ಸಂಸದೆ ಮಂಗಲಾ ಅಂಗಡಿ, ಮಾಜಿ ಸಚಿವ ಶ್ರೀಮಂತ ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್, ಜಗದೀಶ್ ಮೆಟಗುಡ್, ವಿ. ಐ ಪಾಟೀಲ್, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ ಅನಿಲ್ ಬೆನಕೆ, ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಣಿ ಸದಸ್ಯರಾದ ಲಕ್ಷ್ಮಣ್ ತಪಸಿ, ಎಂ.ಬಿ ಜಿರಲಿ, ಬಸವರಾಜ್ ಯಂಕಂಚಿ, ವಿರೂಪಾಕ್ಷ ಮಾಮನಿ, ಬಸವರಾಜ್ ಹುಂದ್ರಿ, ಎಫ್.ಎಸ್ ಸಿದ್ದನಗೌಡ್ರ, ಶ್ರೀ ಶಕೀಲಾ ದಾರವಾಡೇಕರ್, ಡಾ. ರಾಜಶೇಖರ್ ನೇರ್ಲಿ, ಹಾಗೂ ಬೆಳಗಾವಿಯ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.