ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ

IMG-20231211-WA0006.jpg
Published on


ಡಿ‌.13ರಂದು ಬಿ.ಎಸ್. ಯಡಿಯೂರಪ್ಪ ಮಾರ್ಗದಲ್ಲಿ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ ಖಂಡಿಸಿ ಡಿ.೧೩ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ ಹೇಳಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಬಾರು ಕೋಲಿನ ಏಟು ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,  ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಬಿ.ಶ್ರೀರಾಮುಲು ಸೇರಿದಂತೆ 25 ಸಾವಿರ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಜನರು ಭಾಗವಹಿಸಲಿದ್ದಾರೆ. ಸಮಾವೇಶ ಮೂಲಕ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net