

ಬೆಳಗಾವಿ: ನಮ್ಮ ಪಕ್ಷದ ರಾಷ್ಟ್ರೀಯ ವರಿಷ್ಠರು ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದ್ದಾರೆ. ನಾವೆಲ್ಲರೂ ಒಪ್ಪಿಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ವಿಜಯೇಂದ್ರ ಅವರು ರಾಜ್ಯದ ಅಧ್ಯಕ್ಷರೆ ಎಂದು ಆಯ್ಕೆ ಮಾಡಿದೆ. ಅವರನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಕೆಲವರು ವಿರೋಧ ವ್ಯಕ್ತಪಡಿಸಿದರೆ ಅದನ್ನು ಪಕ್ಷದ ಆಂತರಿಕ ಚೌಕಟ್ಟಿನಲ್ಲಿ ಮಾತನಾಡಬೇಕು ಎಂದರು.
ಸಹಜವಾಗಿ ಆಡಳಿತ ಪಕ್ಷದಲ್ಲಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಪಘಾತವಾದಾಗ ನಮ್ಮ ಜಿಲ್ಲೆಯ ಸಚಿವರು ಎಂದು ಆಸ್ಪತ್ರೆಗೆ ಹೋಗಿ ಆರೋಗ್ಯ ವಿಚಾರಿಸಿ ಬಂದಿದ್ದೇವೆ. ವಾಹನದಲ್ಲಿ ಏನಿತ್ತು ಎನ್ನುವುದು ಸಚಿವರು ಹಾಗೂ ಮುಖ್ಯಮಂತ್ರಿಗಳು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪಾಲಿಕೆ ಸದಸ್ಯರಾದ ಹನುಮಂತ ಕೊಂಗಾಲಿ, ರಾಜಶೇಖರ ಡೋಣಿ, ಬಿಜೆಪಿ ಮುಖಂಡರಾದ ರಮೇಶ ದೇಶಪಾಂಡೆ, ಈರಯ್ಯ ಕೋತ, ಶಶಿ ಪಾಟ್ಕರ್, ಸಚಿನ ಕಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.