

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಇಂದಬೆಟ್ಟು ಶಕ್ತಿಕೇಂದ್ರ ಪಂಚಾಯಿತಿ ಮಟ್ಟದ ಸಭೆ ನಡೆಯಿತು. ಹಿರಿಯ ಕಾರ್ಯಕರ್ತ ರಾಮಣ್ಣ ಗೌಡ ದೇರೆಮಾರು ಉದ್ಘಾಟಿಸಿದರು.
ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆ ಕುರಿತು ಸಮಾಲೋಚನೆ ನಡೆಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ‌್ವಾರ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಲಾಲ ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಲ ಬೈಠಕ್ ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಅಭ್ಯಾಸ ವರ್ಗ ಪ್ರಮುಖ್ ಕೊರಗಪ್ಪ ಗೌಡ ಚಾರ್ಮಾಡಿ, ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರಕಾಶ್ ಜೈನ್ ಎಳನೀರು, ಇಂದಬೆಟ್ಟು ಶಕ್ತಿಕೇಂದ್ರ ಪ್ರಮುಖ್ ಶ್ರೀಕಾಂತ್ ಎಸ್.ಇಂದಬೆಟ್ಟು, ಪಂಚಾಯಿತಿ ಅಧ್ಯಕ್ಷೆ ಆಶಾಲತಾ, ಜನಪ್ರತಿನಿದಿನಗಳು, ಶಕ್ತಿಕೇಂದ್ರ ಪ್ರಮುಖ್ ಮತ್ತಿತರರಿದ್ದರು. ಆನಂದ ಅಡಿಲು ಕಾರ್ಯಕ್ರಮ ನಿರೂಪಿಸಿದರು.