ಗ್ಯಾರಂಟಿ ಯೋಜನೆಗೆ ಬಿಜೆಪಿ ಭೀತಿ

SS Mallikarjun (dvg south)
Published on

ದಾವಣಗೆರೆ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುತ್ತಿದ್ದು, ಇದರಿಂದ ಹೆದರಿರುವ ಕೇಂದ್ರ ಸರ್ಕಾರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 200 ರೂ. ಕಡಿತಗೊಳಿಸಿದೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.

ನಗರದಲ್ಲಿ ಬುಧವಾರ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಪ್ರತಿಪಕ್ಷದವರು ಟೀಕಿಸಿದ್ದರು. ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ತಮಗೆ ಉಳಿಗಾಲವಿಲ್ಲ ಎಂದು ಭಾವಿಸಿ ಬೆಲೆ ಇಳಿಕೆ ಮಾಡಿದ್ದಾರೆ ಎಂದು ತಿಳಿಸಿದರು.

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಬಡತನವೆಂದರೆ ಗೊತ್ತಿಲ್ಲ. ಅದು ಶ್ರೀಮಂತರ ಪಕ್ಷ. ಸಾಧನೆಗಳನ್ನು ಹೇಳಿಕೊಳ್ಳುತ್ತಾರೆ, ಆದರೆ, ಜನರಿಗೆ ಬೇಕಾಗಿದ್ದನ್ನು ಮಾಡಿಲ್ಲ. ಹಸಿದ ಹೊಟ್ಟೆಗೆ ಹಿಟ್ಟು ನೀಡುವ ಕಾಳಜಿಯನ್ನು ತೋರಿಲ್ಲ ಎಂದು ಟೀಕಿಸಿದರು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೇಳಿದರೆ ದಾಸ್ತಾನು ಇದ್ದರೂ ಕೊಡಲಿಲ್ಲ, ಎಥೆನಾಲ್ ಉತ್ಪಾದನೆ ಮಾಡುತ್ತೇವೆ ಎಂದು ಹೇಳಿದರು. ಅವರಿಗೆ ಬಡವರ ಪರವಾದ ಚಿಂತನೆಯಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net