ಪರಿಶಿಷ್ಟ ಪಂಗಡಕ್ಕೆ ಹೆಚ್ಚಿನ ಪ್ರಮಾಣದ ರಾಜಕೀಯ ಅಧಿಕಾರ ನೀಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ

23
Published on

ಮೈಸೂರು: ಪರಿಶಿಷ್ಟ ಪಂಗಡಕ್ಕೆ ಹೆಚ್ಚಿನ ಪ್ರಮಾಣದ ರಾಜಕೀಯ ಅಧಿಕಾರ ನೀಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಮಹಾಂತೇಶ್ ನಾಯಕ ಹೇಳಿದರು.

ನಗರದಲ್ಲಿ ತಿಂಗಳ ಅಂತ್ಯಕ್ಕೆ ಆಯೋಜಿಸಲು ಉದ್ದೇಶಿಸಿರುವ ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾದ ಮುನ್ನಡೆ ಸಮಾವೇಶ ಸಂಬಂಧ ಗುರುವಾರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮೈಸೂರು ನಗರ ಮತ್ತು ಗ್ರಾಮಾಂತರ ಎಸ್‌ಟಿ ಮೋರ್ಚಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ಪಕ್ಷವು ಅಧಿಕಾರದಲ್ಲಿದ್ದಾಗ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಮಾಡಿದೆ. ಜಿಲ್ಲಾ ಕೇಂದ್ರಗಳಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಮಾಡಿದೆ. ಎಸ್‌ಟಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸಿದೆ ಎಂದರು.

ಸಮಾವೇಶಕ್ಕೆ ಮೈಸೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ 16 ಮಂಡಲಗಳಿಂದ 2 ಸಾವಿರಕ್ಕೂ ಹೆಚ್ಚು ಜನ ಸೇರಿಸಿ ಸಮಾವೇಶದ ಯಶಸ್ವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ತಿಳಿಸಿದರು.

ಮಾಜಿ ಮೇಯರ್ ಶಿವಕುಮಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ಮಹೇಶ್, ಎಸ್‌ಟಿ ಮೋರ್ಚಾದ ನಗರಾಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ, ಗ್ರಾಮಾಂತರ ಘಟಕದ ಅಧ್ಯಕ್ಷ ಮುದ್ದುಕೃಷ್ಣ, ಪದಾಧಿಕಾರಿಗಳಾದ ನಾರಾಯಣ, ಕೃಷ್ಣ ನಾಯಕ, ಲಕ್ಷಣ್, ವೀರನಗೆರೆ ಶ್ರೀನಿವಾಸ್, ನಂದೀಶ್, ವಿಜಯನಾಯಕ, ಎಂ.ಶಿವಪ್ರಕಾಶ್, ನಾರಾಯಣಸ್ವಾಮಿ, ಪ್ರಕಾಶ್, ಮರಿ ಸ್ವಾಮಿ ನಾಯಕ, ಗೋಕುಲಂ ನಾಗ, ರಂಗಸ್ವಾಮಿ ನಾಯಕ, ಲೋಕೇಶ್ ಜಯಸಿಂಹ, ನಾಗರಾಜು, ಸಿದ್ದರಾಜು, ರಾಘವ ನಾಯಕ, ಜೋಗಪ್ಪ, ಮಂಜುನಾಥ್ ಮದಕರಿ, ಜೋಗಿ ಬಸವರಾಜು, ನಾಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net