ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಿಜೆಪಿ ಗರಂ

HYR bjp 08
Published on

ಹಿರಿಯೂರು: ತಾಲೂಕು ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ ಕಾರ್ಯಕರ್ತರು, ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ಸರ್ಕಾರದ ನಿಲುವು ವಿರೋಧಿಸಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಮಳೆ ಕೊರತೆಯಿಂದ ಬರಗಾಲದ ಸಮಸ್ಯೆ ಉಂಟಾಗಿದೆ. ವಿದ್ಯುತ್ ಕಣ್ಣಾಮುಚ್ಚಾಲೆ, ಕೃಷಿ ಪಂಪ್‌ಸೆಟ್‌ಗಳಿಗೆ ಅನಿಯಮಿತ ಲೋಡ್ ಶೆಡಿಂಗ್ ಪರಿಣಾಮ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತಪರ ಯೋಜನೆಗಳನ್ನು ರದ್ದುಗೊಳಿಸಿ, ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ದೂರಿದರು.

ಸರ್ಕಾರ ರೈತರ ಸಹಾಯಕ್ಕೆ ಬರಬೇಕಾದ ಅಗತ್ಯವಿದ್ದು, ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ರೈತ ವಿರೋಧಿ ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ನಿರಂತರವಾಗಿ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಮಂಡಲ ಅಧ್ಯಕ್ಷ ವಿ.ವಿಶ್ವನಾಥ್, ರೈತ ಮೋರ್ಚಾ ಅಧ್ಯಕ್ಷ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಸಂಪತ್‌ಕುಮಾರ್, ಹಿರಿಯ ಮುಖಂಡ ಲಕ್ಷ್ಮೀಕಾಂತ, ಪ್ರ.ಕಾರ್ಯದರ್ಶಿ ಶಂಭುಲಿಂಗೇಶ್, ಮುಖಂಡರಾದ ಕೇಶವಮೂರ್ತಿ, ರಾಘವೇಂದ್ರ, ಮಲ್ಲೇಶ್, ವೆಂಕಟೇಶ್, ಉಮೇಶ್, ಹರೀಶ್, ಜೆ.ಬಿ.ರಾಜು, ಸಿದ್ದಮ್ಮ, ಮಹೇಶ್, ರತ್ನಮ್ಮ, ದಾಕ್ಷಾಯಣಮ್ಮ, ತಾಹಿರಾಬಾನು, ನಾಗೇಂದ್ರಪ್ಪ, ಪ್ರಜ್ವಲ್, ವೇದಮೂರ್ತಿ, ಪಾರ್ಥ, ಜನಾರ್ದನ್, ತಿಮ್ಮರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net