ಕಾಂಗ್ರೆಸ್ ಗ್ಯಾರಂಟಿಯಿಂದ ಬಿಜೆಪಿ ಕಕ್ಕಾಬಿಕ್ಕಿ

30-nvl-1 KONARADDY
Published on

ನವಲಗುಂದ: ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದರಿಂದ ಬಿಜೆಪಿ ಪಕ್ಷದವರು ಕಕ್ಕಾಬಿಕ್ಕಿಯಾಗಿದ್ದಾರೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಅಭಿಪ್ರಾಯಪಟ್ಟರು.

ಧಾರವಾಡ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಹಾಗೂ ನವಲಗುಂದ ಪುರಸಭೆ ವತಿಯಿಂದ ಪಟ್ಟಣದ ಗವಿಮಠದ ದಾಸೋಹ ಭವನದಲ್ಲಿ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಗೃಹಲಕ್ಷ್ಮಿ ಸೇರಿ ಐದು ಯೋಜನೆಗಳು ನಮ್ಮ ಪಕ್ಷದ ಪ್ರಣಾಳಿಕೆಯಾಗಿದ್ದವು. ಆ ಯೋಜನೆಗಳನ್ನು ಇಂದು ಯಶಸ್ವಿಗೊಳಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ ಅವರ ಕಾರ್ಯವನ್ನು ಇಡೀ ದೇಶ ನಿಬ್ಬೆರಗಾಗುವಂತೆ ಮಾಡಿದೆ ಎಂದರು.

ಗವಿಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಮಹಿಳೆಯರು ಆರ್ಥಿಕವಾಗಿ ಮತ್ತು ಅವರ ಸಬಲೀಕರಣಕ್ಕಾಗಿ ಸರ್ಕಾರ ಹಣ ನೀಡಿದೆ. ಅದನ್ನು ಉತ್ತಮ ಕೆಲಸಕ್ಕಾಗಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ಧಾರವಾಡದ ಯೋಜನಾ ನಿರ್ದೇಶಕ ಬಿ.ಎಸ್. ರಮೇಶ, ಪುರಸಭೆ ಸದಸ್ಯೆ ಪದ್ಮಾವತಿ ಪೂಜಾರ, ಹುಸೇನಬೀ ಧಾರವಾಡ, ತಹಸೀಲ್ದಾರ್ ಸುಧೀರ ಸಾಹುಕಾರ, ತಾಪಂ ಇಒ ಭಾಗ್ಯಶ್ರೀ ಜಹಾಗೀರದಾರ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾಗನೂರ, ಸಿಡಿಪಿಒ ವಿಜಯಲಕ್ಷ್ಮಿ ಪಾಟೀಲ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net