ಜಗತ್ತಿನ ಅತಿ ದೊಡ್ಡ ಪಕ್ಷ ಬಿಜೆಪಿ

BJP is the biggest party in the world
ಇಂಡಿ ಪಟ್ಟಣದ ಶಂಕರ ಪಾರ್ವತಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸದಸ್ಯತ್ವ ಅಭಿಯಾನ ಮತ್ತು ಸಂಘಟನಾ ಪರ್ವ ಕಾರ್ಯಕ್ರಮದಲ್ಲಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿದರು. ಕಾಸುಗೌಡ ಬಿರಾದಾರ, ಶ್ರೀಕಾಂತ ದೇವರ, ಶೀಲವಂತ ಉಮರಾಣಿ, ಅನೀಲ ಜಮಾದಾರ ಇತರರಿದ್ದಾರೆ.
Published on

ಇಂಡಿ: ಭಾರತೀಯ ಜನತಾ ಪಕ್ಷದ ಸದಸ್ಯತ್ವದ ಅಭಿಯಾನದಲ್ಲಿ ಮತಕ್ಷೇತ್ರ ಜಿಲ್ಲೆಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನಕ್ಕೆ ತರಲು ಕಾರ್ಯಕರ್ತರೆಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಬುಧವಾರ ಪಟ್ಟಣದ ಶಂಕರ ಪಾರ್ವತಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸದಸ್ಯತ್ವ ಅಭಿಯಾನ ಮತ್ತು ಸಂಘಟನಾ ಪರ್ವದಲ್ಲಿ ಮಾತನಾಡಿದ ಅವರು, 11 ಕೋಟಿ ಸದಸ್ಯತ್ವರನ್ನು ಹೊಂದುವ ಮೂಲಕ ಜಗತ್ತಿನಲ್ಲಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ ಎಂದರು.

ಮುಖಂಡರಾದ ವಿವೇಕ ಡಬ್ಬಿ, ಮಳುಗೌಡ ಪಾಟೀಲ, ದೇವೆಂದ್ರ ಕುಂಬಾರ ಮತ್ತು ಇಂಡಿ ಮಂಡಲ ಪ್ರಧಾನ ಮಲ್ಲಿಕಾರ್ಜುನ ಕಿವಡೆ ಮಾತನಾಡಿದರು.

ಕಾಸುಗೌಡ ಬಿರಾದಾರ, ಶ್ರೀಕಾಂತ ದೇವರ, ಶೀಲವಂತ ಉಮರಾಣಿ, ಅನೀಲ ಜಮಾದಾರ, ಭೀಮಸಿಂಗ ರಾಠೋಡ, ವಿಜಯಲಕ್ಷ್ಮೀ ರೂಗಿಮಠ, ಈರಣ್ಣ ರಾವೂರ, ಮಹಾದೇವ ರಜಪೂತ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net