ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಗೆಲ್ಲುವುದು ನಾವೇ

siddu
Published on

ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾವು ರಾಜ್ಯದಲ್ಲಿ 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್​ನವರು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಏನೋ ಮಾತುಕತೆ ನಡೆಸುತ್ತಾ ಇದ್ದಾರೆ. ನಾವೇನೂ ಭಯ ಪಡುವುದು ಬೇಕಾಗಿಲ್ಲ. ಅವರು ಮೈತ್ರಿ ಮಾಡಿಕೊಂಡರೂ ನಾವೇ ಹೆಚ್ಚು ಸೀಟು ಗೆಲ್ಲುವುದು. ಮೈತ್ರಿ ಮಾಡಿಕೊಳ್ಳದಿದ್ದರೂ ನಾವೇ ಗೆಲ್ಲುವುದು ಎಂದರು.

ಸಚಿವರ ಬಗ್ಗೆ ಶಾಸಕರು ಅಸಮಾಧಾನ ಹೊರ ಹಾಕಿಲ್ಲ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಾಗಿವೆ. ಕಳೆದ ವಾರ ರಾಹುಲ ಗಾಂಧಿ ಅವರು ಬಂದಿದ್ದರಿಂದ ಸಭೆ ಕರೆಯಲು ಆಗಿಲ್ಲ ಗುರುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇವೆ. ಸಿಂಗಾಪುರದಲ್ಲಿ ಕುಳಿತು ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ನಡೀತಾ ಇದೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net