ಬಿಜೆಪಿ-ಜೆಡಿಎಸ್ ಸಂಭ್ರಮಾಚರಣೆ

bjp-jds
ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಸಂಭ್ರಮಾಚರಣೆ
Published on

ಪಡುಬಿದ್ರಿ: ಈ ಬಾರಿಯ ವಿಧಾನ ಪರಿಷತ್ ಚುನಾವಣೆ ನಮಗೆ ಸವಾಲಾಗಿತ್ತು. ಆದರೂ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಗೆಲುವಾಗಿದ್ದು, ಇದು ಕಾರ್ಯಕರ್ತರ ಪರಿಶ್ರಮದ ಗೆಲುವು, ಮುಂದಿನ ಎಲ್ಲ ಚುನಾವಣೆಗಳಿಗೂ ದಿಕ್ಸೂಚಿಯಾಗಲಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಎನ್‌ಡಿಎ ಒಕ್ಕೂಟ ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು ಎಸ್.ಎಲ್.ಭೋಜೇಗೌಡರ ಪರವಾಗಿ ಬಿಜೆಪಿ ಜೆಡಿಎಸ್ ಶುಕ್ರವಾರ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಮಾತನಾಡಿದರು.

ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಜಿತೇಂದ್ರ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜೆಡಿಎಸ್ ಕಾಪು ಬ್ಲಾಕ್ ಅಧ್ಯಕ್ಷ ದೇವರಾಜ್ ತೊಟ್ಟಂ, ಪ್ರಮುಖರಾದ ನಯನಾ ಗಣೇಶ್, ನವೀನ್ ಎಸ್.ಕೆ., ಸುಧಾಮ ಶೆಟ್ಟಿ, ಅನಿಲ್‌ಕುಮಾರ್, ಉಮೇಶ್ ಕರ್ಕೇರ, ಕೃಷ್ಣ ರಾವ್, ಗೋಪಾಲ ಕೃಷ್ಣ ಭಟ್, ಚಂದ್ರ ಮಲ್ಲಾರು, ಸುರೇಖಾ ಶೈಲೇಶ್, ಕೇಸರಿ ಯುವರಾಜ್, ಪವಿತ್ರಾ ಶೆಟ್ಟಿ, ಶಶಿಪ್ರಭಾ ಶೆಟ್ಟಿ, ಗಣೇಶ್ ಶೆಟ್ಟಿ, ಚಂದ್ರಹಾಸ ಎರ್ಮಾಳು, ಶೇಖ್ ನಜೀರ್ ಮತ್ತಿತರರಿದ್ದರು.

ನಮಗೆಲ್ಲರಿಗೂ ಸಂಭ್ರಮದ ಕ್ಷಣವಾಗಿದ್ದು ಗೆಲುವಿನಲ್ಲಿ ಎಲ್ಲರ ಶ್ರಮವಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಉತ್ತಮ ನಿರ್ಧಾರವಾಗಿದೆ ಎನ್ನುವುದನ್ನು ಲೋಕಸಭಾ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆ ಫಲಿತಾಂಶ ತೋರಿಸಿಕೊಟ್ಟಿದೆ. ಈ ಗೆಲುವು ನಮ್ಮ ಮೈತ್ರಿಯನ್ನು ಗಟ್ಟಿಗೊಳಿಸಿದೆ. ಮುಂದಿನ ಚುನಾವಣೆಗಳಿಗೆ ಇದು ದಿಕ್ಸೂಚಿಯಾಗಲಿದೆ.-ಯೋಗೀಶ್ ಶೆಟ್ಟಿ ಬಾಲಾಜಿ ಜೆಡಿಎಸ್ ಜಿಲ್ಲಾಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net