

ಮಡಿಕೇರಿ: ರಾಜ್ಯದಲ್ಲಿ ಬಿಜೆಪಿ ಮತ್ತು ಜಾತ್ಯಾತೀತ ಜನತಾ ದಳ ಮೈತ್ರಿಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿರುವ ಹಿನ್ನೆಲೆ ಎರಡು ಪಕ್ಷದ ಮೈತ್ರಿ ಸಭೆ ಮಡಿಕೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಮುಂದಿನ ಲೋಕ ಸಭಾ ಚುನಾವಣೆಯನ್ನು ಜಂಟಿಯಾಗಿ ಎದುರುಸುವ ತೀರ್ಮಾನವನ್ನು ಮಾಡಲಾಯಿತು. ಈ ನಿಟ್ಟಿನಲ್ಲಿ ಕಾರ್ಯ ತಂತ್ರ ರೂಪಿಸುವಂತೆ ಚರ್ಚೆ ನಡೆಯಿತು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಜಾತ್ಯಾತೀತ ಜನತಾ ದಳದ ಕೋರ್ ಕಮಿಟಿ ಸದಸ್ಯರಾದ ಟಿ.ಎಲ್.ವಿಶ್ವ, ಪ್ರವೀಣ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಸೇರಿದಂತೆ ಎರಡು ಪಕ್ಷದ ಪ್ರಮುಖರು ಹಾಜರಿದ್ದರು.