

ಚಿಕ್ಕಮಗಳೂರು: ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಉz್ದೆÃಶದಿಂದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಜೊತೆ ಚರ್ಚೆ ನಡೆಸಿದ್ದು, ಎನ್‌ಡಿಎ ಮೈತ್ರಿಕೂಟವನ್ನು ನಗರಸಭೆಗೂ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
ನಗರದ ಹೋಟೆಲ್ ಒಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಸದಸ್ಯರನ್ನೊಳಗೊಂಡ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಸಭೆಗೂ ಎನ್‌ಡಿಎ ಮೈತ್ರಿಕೂಟ ವಿಸ್ತರಿಸುವ ತೀರ್ಮಾನದಂತೆ ಮುಂದಿನ ನಗರಸಭೆ ಅವಧಿಯನ್ನು ಮೂರು ಅವಧಿಯಾಗಿ ವಿಂಗಡಿಸಿ ಎರಡು ಅವಧಿಗೆ ಬಿಜೆಪಿ ಒಂದು ಅವಧಿಗೆ ಜೆಡಿಎಸ್ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಹಿಂದಿನ ತಪ್ಪುಗಳು ಮರುಕಳಿಸದಂತೆ ಎರಡೂ ಪಕ್ಷಗಳ ಸದಸ್ಯರುಗಳು ಒಗ್ಗಟ್ಟಿನಿಂದ ಒಳ್ಳೆಯ ಜನಪರ ಆಡಳಿತ ನೀಡಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಮುಂದೆ ಯಾರು ನಗರಸಭೆ ಅಧ್ಯಕ್ಷರಾಗಬೇಕು ಎಂಬ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಜೆಡಿಎಸ್ ಮುಖಂಡರೊAದಿಗೆ ಚರ್ಚಿಸಿ ನಿರ್ಣಯಿಸಲಾಗಿದೆ ಎಂದು ಹೇಳಿದರು.
ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇವೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಮಾತನಾಡಿ, ಪಕ್ಷದ ವರಿಷ್ಟರು ತೀರ್ಮಾನ ಮಾಡಿದಂತೆ ನಗರಸಭೆಯಲ್ಲಿಯೂ ಮೈತ್ರಿ ಮುಂದುವರಿಯಲಿದೆ. ರಾಜ್ಯಮಟ್ಟದಲ್ಲಿ ನಡೆದಿರುವ ಹೊಂದಾಣಿಕೆ ಆಭಾದಿತ. ಅದನ್ನು ತೋರಿಸಲು ಎರಡೂ ಪಕ್ಷಗಳ ಮುಖಂಡರು ಹಾಗೂ ನಗರಸಭೆ ಸದಸ್ಯರು ಸಭೆಸೇರಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ತಾವು, ಸಿ.ಟಿ ರವಿ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ ಈ ಮೂವರಿಗೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂಬAಧ ಅಭ್ಯರ್ಥಿಗಳ ಆಯ್ಕೆ ಮಾಡಲು ಸೂಚನೆಯಿದೆ. ಎಲ್ಲ ಸದಸ್ಯರುಗಳು ನಮ್ಮ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ತಿಳಿಸಿದ್ದಾರೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರ, ಸ್ಥಾಯಿ ಸಮಿತಿಗೆ ಯಾರನ್ನು ನೇಮಕ ಮಾಡಬೇಕೆಂಬ ಬಗ್ಗೆ ಚುನಾವಣೆ ಮುಂಚೆ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ. ಎಲ್ಲರೂ ನಮ್ಮ ಮೇಲೆ ವಿಶ್ವಾಸವಿಟ್ಟು ತೀರ್ಮಾನಕ್ಕೆ ಅನುಮತಿ ನೀಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಮುಖಂಡರಾದ ಕೋಟೆ ರಂಗನಾಥ್, ಪ್ರೇಮಕುಮಾರ್, ಪುಷ್ವರಾಜ್, ನಗರಸಭೆ ಸದಸ್ಯರಾದ ಉಮಾದೇವಿ ಕೃಷ್ಣಪ್ಪ, ಟಿ.ರಾಜಶೇಖರ್, ಕವಿತಾ ಶೇಖರ್, ದೀಪ ರವಿಕುಮಾರ್, ಮಧುಕುಮಾರ್ ರಾಜ್ ಅರಸ್, ಸುಜಾತ ಶಿವಕುಮಾರ್, ಕುಮಾರ್.ಸಿ.ಎಂ, ಎ.ಸಿ.ಕುಮಾರೇಗೌಡ, ರೂಪ ಕುಮಾರ್, ಗೋಪಿ, ಅನು ಮದುಕರ್, ಶೀಲಾ ದಿನೇಶ್, ಮಣಿಕಂಠ, ವಿಫುಲ್‌ಕುಮಾರ್ ಜೈನ್, ಜೆ.ರಾಜು, ಅಮೃತೇಶ್ ಚೆನ್ನಕೇಶವ, ಭವ್ಯಮಂಜುನಾಥ್, ಲಲಿತರಾಜನಾಯ್ಕ ಉಪಸ್ಥಿತರಿದ್ದರು.