ಆರೋಪಿಗಳನ್ನು ತಕ್ಷಣ ಬಂಧಿಸಲು ಶೇಣವ ಆಗ್ರಹ

Jagadish Shenava 31 jan 18
Published on

ಮಂಗಳೂರು : ಉಡುಪಿಯ ಖಾಸಗಿ ಕಾಲೇಜೊಂದರ ಮಹಿಳಾ ಶೌಚಾಲಯದಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ಹಿಂದೂ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು.
ಬಂಧಿಸದೇ ಇದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ ಶೇಣವ ಹೇಳಿದ್ದಾರೆ.
ಮೊದಲಿಗೆ ಇಂತಹ ಘಟನೆ ನಡೆದೇ ಇಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕೊನೆಗೂ ಬಿಜೆಪಿಯ ಒತ್ತಾಯಕ್ಕೆ ಮಣಿದು ಕೇಸು ದಾಖಲಿಸಿ ಕೊಂಡಿದ್ದಾರೆ. ಆದರೆ ಠಾಣೆಯಲ್ಲೇ ಜಾಮೀನು ಸಿಗುವ ಕಲಂಗಳ
ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಈ ಕ್ರಮ ಖಂಡನೀಯ. ಪೊಲೀಸರು ಈ ಪ್ರಕರಣವನ್ನು ಲಘವಾಗಿ ಪರಿಗಣಿಸಿದಂತಿದೆ. ಜಾಮೀನು ರಹಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಹಾಗೂ ಆರೋಪಿಗಳನ್ನು
ತಕ್ಷಣ ಬಂಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net