ಗ್ರಾಪಂ ಚುನಾವಣೆ ಗೆಲ್ಲಲಿ, ಬಿಜೆಪಿ ಮುಖಂಡರಿಗೆ ಸವಾಲು

HONNALI - BJP- MP Renukacharya MLA (2)
Published on

ದಾವಣಗೆರೆ: ರಾಜ್ಯದಲ್ಲಿ ಪಕ್ಷದ ಸೋಲಿಗೆ ಕಾರಣರು ಯಾರೆಂಬುದು ಎಲ್ಲರಿಗೂ ಗೊತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಪಕ್ಷದ ಉಚ್ಚಾಟಿತ ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಅವರ ದಾವಣಗೆರೆ ನಗರದ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗ ಪಕ್ಷದ ಕಚೇರಿಯಲ್ಲಿ ಕುಳಿತವರು ಒಂದು ಗ್ರಾಮ ಪಂಚಾಯಿತಿ ಚುನಾವಣೆ ಸಹ ಗೆಲ್ಲಲಾರರು. ಅವರು ನನ್ನನ್ನೇನು ಮಾಡಲಾಗದು ಎಂದು ಸವಾಲು ಹಾಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net