ಮಹಿಳೆ ಆರೋಗ್ಯ ವಿಚಾರಿಸಿದ ಬೆಜೆಪಿ ಮುಖಂಡರು

FotoJet
Published on

ರಾಮನಗರ : ಮಹಿಳಾ ದಿನಾಚರಣೆ ನೆಪದಲ್ಲಿ ನಡೆದ ರಾಜಕೀಯ ಕಾರ್ಯಕ್ರಮದಲ್ಲಿ ಮಹಿಳೆಯ ಕೈ ಮುರಿದಿದ್ದು, ಇದಕ್ಕೆ ಯಾರು ಹೊಣೆ ಎಂದು ಬಿಜೆಪಿ ಮುಖಂಡ ಗೌತಮ್ ಗೌಡ ಪ್ರಶ್ನಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿದ್ದ ವೇಳೆ ಕೈ ಮುರಿದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಇಡೀ ದೇಶ ಶೋಕಾಚರಣೆಯಲ್ಲಿದೆ. ಆದರೆ, ಶಾಸಕ ಇಕ್ಬಾಲ್ ಹುಸೇನ್ ಮಹಿಳಾ ದಿನಾಚರಣೆ ಹೆಸರಿನಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ. ಈ ಕಾರ್ಯಕ್ರಮ ಅವ್ಯವಸ್ಥೆಯಿಂದ ಕೂಡಿತ್ತು. ಇದರ ಫಲವಾಗಿ ಮಹಿಳೆಯೊಬ್ಬರು ಕೈ ಮುರಿದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಆಗಿದೆ. ಮಹಿಳೆಯ ಆರೋಗ್ಯದ ಬಗ್ಗೆ ವೈದ್ಯರ ಬಳಿ ಚರ್ಚಿಸಲಾಗಿದ್ದು, ಶನಿವಾರ ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ ಎಂದರು.

ಮಹಿಳೆಯರಿಗೆ ಸೀರೆಯ ಆಸೆ ತೋರಿಸಿ ಕಾರ್ಯಕ್ರಮಕ್ಕೆ ಬಸ್‌ಗಳ ಮೂಲಕ ಕರೆ ತರಲಾಗಿತ್ತು. ಇಡೀ ಕಾರ್ಯಕ್ರಮ ಅಧ್ವಾನವಾಗಿತ್ತು. ಸರಿಯಾದ ವ್ಯವಸ್ಥೆ ಮಾಡದೆ ಮಹಿಳೆಯರು ಹಾಗೂ ಮಕ್ಕಳಿಗೆ ತೊಂದರೆಯಾಗಿದೆ. ಮಹಿಳಾ ದಿನಾಚರಣೆ ಮಾಡಲಿ, ಅದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ, ಕಾರ್ಯಕ್ರಮದ ಹೆಸರಿನಲ್ಲಿ ಶೋಷಣೆ ಮಾಡಿರುವುದು ಸರಿಯಲ್ಲ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಮುಖಂಡರಾದ ಜನಾರ್ಧನ್ ಗೌಡ, ರುದ್ರದೇವರು, ಕಿಶನ್ ಗೌಡ, ರಾಘವೇಂದ್ರ, ನಾಗೇಶ್, ಚಂದನ್ ಮೋರೆ ಮುಂತಾದವರು ಇದ್ದರು.

ನಾಳೆ ಶಸ್ತ್ರ ಚಿಕಿತ್ಸೆ

ರಾಮನಗರ ತಾಲೂಕಿನ ಶ್ಯಾನುಭೋಗನಹಳ್ಳಿ ಮಹಾಲಕ್ಷ್ಮೀ (45) ಕಾಲ್ತುಳಿತಕ್ಕೆ ಸಿಲುಕು ಕೈ ಮುರಿದು ಕೊಂಡು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಶಸ್ತ್ರ ಚಿಕಿತ್ಸೆ ಶನಿವಾರ ನಡೆಯಲಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net