ಬಿಜೆಪಿಯವರು ಬರ ಅಧ್ಯಯನ ನಡೆಸಿ ಕೇಂದ್ರಕ್ಕೆ ವರದಿ ಕೊಡಲಿ

dkshivakumar
Published on

ಹುಬ್ಬಳ್ಳಿ: ಬಿಜೆಪಿಯವರು ಬರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೇಂದ್ರಕ್ಕೆ ಬರ ಪರಿಹಾರ ಕೋರಿ ಮನವಿ ಸಲ್ಲಿಸಿದ್ದೇವೆ ಎಂದರು.

ಇನ್ನು ಮೂರು ನಾಲ್ಕು ದಿನಗಳಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ. ಈಗಾಗಲೇ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರ ನೇಮಕ ಮಾಡಲಾಗಿತ್ತು. ಶೆ. 75 ರಷ್ಟು ಕ್ಷೇತ್ರಕ್ಕೆ ವೀಕ್ಷಕರು ತೆರಳಿ ಕಾರ್ಯಕರ್ತರನ್ನು ಭೇಟಿ ಮಾಡಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ವರದಿ ಇನ್ನೂ ನೀಡಿಲ್ಲ ಎಂದರು.

ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲಿದೇ ಅಸಮಾಧಾನ ಎಂದು ಪ್ರಶ್ನಿಸಿದರು. ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತಿಲ್ಲ. ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆಯಾಗಿ ಐದು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆ ಮಾಡದ ಪಕ್ಷ ಬಿಜೆಪಿ ಎಂದು ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net