ಬಿಜೆಪಿ ಸೆಂಟ್ರಲ್ ಕ್ಷೇತ್ರದ ಸಂಘಟನಾತ್ಮಕ ಸಭೆ

BJP MEETING NEW
Published on

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಮಹಾನಗರ ಪಾಲಿಕೆ ಸದಸ್ಯರ ಹಾಗೂ ಪ್ರಮುಖ ಪದಾಧಿಕಾರಿಗಳ ಸಂಘಟನಾತ್ಮಕ ಸಭೆ ನಗರದಲ್ಲಿ ಬುಧವಾರ ನಡೆಯಿತು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ನೋಂದಣಿ ಕಾರ್ಯ ಹೆಚ್ಚು ನಡೆಯಬೇಕು ಎಂದು ಸಲಹೆ ನೀಡಿದರು.

ಸೆಂಟ್ರಲ್ ಕ್ಷೇತ್ರದ 253 ಬೂತ್​ಗಳಲ್ಲಿ ಸಂಘಟನಾತ್ಮಕ ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮಗಳ ಯಶಸ್ಸಿಗೆ ಶ್ರಮಿಸಬೇಕು ಎಂದು ಹೇಳಿದರು.

ಬಿಜೆಪಿ ಹು-ಧಾ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ ಮಾತನಾಡಿದರು. ಮಹಾಪೌರರಾದ ವೀಣಾ ಬರದ್ವಾಡ, ಮಾಜಿ ಮಹಾಪೌರರಾದ ವೀರಣ್ಣ ಸವಡಿ, ವೆಂಕಟೇಶ ಮೇಸ್ತ್ರಿ, ಪ್ರಕಾಶ ಕ್ಯಾರಕಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಗೋಪಾಲ ಬದ್ದಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net