

ಉಡುಪಿ: ಲೋಕಸಭಾ ಚುನಾವಣೆಗೆ ಸಜ್ಜಾಗಿರುವ ರಾಜ್ಯ ಬಿಜೆಪಿ, ಶಕ್ತಿ ವಂದನಾ ಅಭಿಯಾನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾ.4ರಿಂದ 6ರ ವಿವಿಧ ಕಾರ್ಯಕ್ರಮ ಆಯೋಜಿಸಿದೆ. ತನ್ನಮಿತ್ತ ಉಡುಪಿಯಲ್ಲಿ ಮಂಗಳವಾರ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಮಹಿಳೆಯರ ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು.
ಬನ್ನಂಜೆಯ ನಾರಾಯಣ ಗುರು ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರಕುಮಾರ್ ಕುಂದಾಪುರ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಬೈಕ್ ರ್ಯಾಲಿಗೆ ಚಾಲನೆ ನೀಡಿ, ಶುಭ ಹಾರೈಸಿದರು.
ಮತ್ತೊಮ್ಮೆ ಮೋದಿ:
ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಗಾಗಿ ಕಳೆದ ಎರಡು ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಹೀಗಾಗಿ ದೇಶದ ಸರ್ವತೋಮುಖ ಏಳಿಗೆಗಾಗಿ "ಮೋದಿ ಮತ್ತೊಮ್ಮೆ' ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ ಬಿಜೆಪಿಯ ಸಂಟನಾತ್ಮಕ 39 ಜಿಲ್ಲೆಗಳಲ್ಲಿರುವ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದರು.
ಭಾಷಣ ವೀಕ್ಷಣೆ:
ಮಾ.6ರಂದು ಪಶ್ಚಿಮ ಬಂಗಾಲದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ದೇಶದ ಮಹಿಳೆಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ 312 ಮಂಡಳಗಳಲ್ಲಿ ಮಹಿಳಾ ಮೋರ್ಚಾ ವತಿಯಿಂದ ಎಲ್ಇಡಿ ಪರದೆ ಅಳವಡಿಸಿ ಎಲ್ಲ ಸ್ವಸಹಾಯ ಸಂಗಳ ಮಹಿಳೆಯರು ಭಾಷಣ ವೀಸಿಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ್ ಶೆಟ್ಟಿ ಮಾತನಾಡಿದರು.
ಬೈಕ್ ರ್ಯಾಲಿ:
ಮಹಿಳೆಯರ ಬೈಕ್ ರ್ಯಾಲಿ ಸಿಟಿ ಬಸ್ ನಿಲ್ದಾಣ, ಕಲ್ಸಂಕ, ಶಾರದಾ ಮಂಟಪ ಮಾರ್ಗವಾಗಿ ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ಸಮಾಪನಗೊಂಡಿತು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿಗಳಾದ ನಳಿನಿ ಪಿ. ರಾವ್, ಅನಿತಾ ಮರವಂತೆ, ಮಹಿಳಾ ಪ್ರಮುಖರಾದ ಶ್ಯಾಮಲಾ ಎಸ್.ಕುಂದರ್, ರಶ್ಮಿತಾ ಶೆಟ್ಟಿ, ಸುಜಾತಾ ಸತೀಶ್, ಅಶ್ವಿನ ಶೆಟ್ಟಿ, ಪೂರ್ಣಿಮಾ ರತ್ನಾಕರ್, ತಾರಾ ಆಚಾರ್ಯ, ಭಾರತಿ ಚಂದ್ರಶೇಖರ್ ಸೇರಿದಂತೆ ನೂರಾರು ಮಹಿಳೆಯರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ರಾವೇಂದ್ರ ಕಿಣಿ, ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರ ಅಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶಶಾಂಕ ಶಿವತ್ತಾಯ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಇತರರು ಉಪಸ್ಥಿತರಿದ್ದರು.