ಜಿಲ್ಲಾ ಮಹಿಳಾ ಮೋರ್ಚಾದಿಂದ ವಿಶೇಷ ಪೂಜೆ

udp-8-bjp
Published on

ಉಡುಪಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ೨೬ ಅಮಾಯಕ ಹಿಂದೂಗಳ ಮಾರಣಹೋಮಗೈದ ಉಗ್ರರ ಸಂಹಾರಕ್ಕೆ 'ಆಪರೇಶನ್ ಸಿಂಧೂರ್' ಕಾರ್ಯಾಚರಣೆ ಮೂಲಕ ಉಗ್ರರನ್ನು ಸದೆ ಬಡಿದ ಭಾರತೀಯ ವೀರ ಯೋಧರ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಉಡುಪಿಯ ಜಗದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆ ನಡೆಯಿತು.

ಪೂಜೆಯಲ್ಲಿ ಎಲ್ಲಾ ಮಾತಾ ಭಗಿನಿಯರಿಗೆ ಅರಿಶಿನ ಕುಂಕುಮ ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷೆ ಸುಜಾಲಾ ಸತೀಶ್, ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸರೋಜಾ ಶೆಣೈ, ಶಾಂತಿ ಮನೋಜ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net