ಬಿಜೆಪಿ ಎಂದರೆ ಬಿಜಿನೆಸ್ ಜನತಾ ಪಾರ್ಟಿ!

madhu bangarappa
Published on

ಶಿವಮೊಗ್ಗ: ಬಿಜೆಪಿ ಎಂದರೆ ಬಿಜಿನೆಸ್ ಜನತಾ ಪಾರ್ಟಿ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ಹಣ ಪಡೆದುಕೊಂಡಿರುವ ಕೇಂದ್ರ ಸರ್ಕಾರ ಬೇರೆ ರಾಜ್ಯಗಳಿಗೆ ಅಧಿಕ ಅನುದಾನ ನೀಡುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ನಾಚಿಕೆಯಾಗಬೇಕು. ಅವರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದಿಂದ ನಮ್ಮ ತೆರಿಗೆ ಹಣದ ಪಾಲು ಕೇಳಲಿ ಎಂದು ಮಧು ಬಂಗಾರಪ್ಪ ಕಿಡಿಕಾರಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ತೆರಿಗೆ ಹಣ ನೀಡಿದಿದ್ದರೂ ನಾವು ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದೇವೆ. ಬಿಜೆಪಿಯವರಿಗೆ ದಮ್ಮು, ತಾಕತ್ತಿದ್ದರೆ ನಮ್ಮ ಗ್ಯಾರಂಟಿಗಳನ್ನು ಬಂದ್ ಮಾಡಿಸಲಿ ಎಂದು ಕುಟುಕಿದರು.

ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದು ಘೋಷಿಸಿ ಮುಂದಿನ ಚುನಾವಣೆಗೆ ಕಣಕ್ಕಿಳಿಯಲಿ ಎಂದು ಸವಾಲು ಹಾಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net