ಪದವೀಧರರ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮ -ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ

dddddddddddd
Published on



ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ವಿಧಾನ ಪರಿಷತ್ ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು.
ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿ ‘ ದಕ್ಷಿಣ ಕನ್ನಡ ಜಿಲ್ಲೆ ಹೆಚ್ಚು ಪದವೀಧರರಿರುವ ಸುಶಿಕ್ಷಿತರ ಕ್ಷೇತ್ರ. ಪದವೀಧರರ ಸಮಸ್ಯೆಗಳು, ಉದ್ಯೋಗದಲ್ಲಿ ಆಗುತ್ತಿರುವ ಬದಲಾವಣೆಗಳಿಂದ ತಂದೊಡ್ಡುವ ಸವಾಲುಗಳನ್ನು ಬಗೆಹರಿಸಿ ಪದವೀಧರರಿಗೆ ನ್ಯಾಯ ಒದಗಿಸಲು ಪೂರಕವಾಗಿ ಶ್ರಮಿಸುತ್ತೇನೆ
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಹರೀಶ್ ಪೂಂಜ , ಭಾಗೀರಥಿ ಮುರುಳ್ಯ, ಎಂಎಲ್‌ಸಿ ಪ್ರತಾಪಸಿಂಹ
ನಾಯಕ್, ಚುನಾವಣೆ ಉಸ್ತುವಾರಿ ಡಿ. ಎಸ್.ಅರುಣ್, ಸಹ ಪ್ರಭಾರಿ ವಿಕಾಸ್ ಪುತ್ತೂರು , ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net