ಬಿಜೆಪಿಗೆ ಕಾರ್ಯಕರ್ತರೇ ಶಕ್ತಿ - ಕಿಶೋರ್ ಕುಮಾರ್

mng-5oct-bjp sabe
Published on



ಮಂಗಳೂರು : ಭಾರತೀಯ ಜನತಾ ಪಾರ್ಟಿಗೆ ನಿಸ್ವಾರ್ಥ ಕಾರ್ಯಕರ್ತರೇ ಶಕ್ತಿ. ಪಕ್ಷದ ಗೆಲುವಿಗಾಗಿ ಹಗಲಿರುಳೆನ್ನದೆ ಶ್ರಮಿಸುವ ಕಾರ್ಯಕರ್ತರಿಂದಾಗಿ ಬಿಜೆಪಿ ಇಂದು ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಗುರುತಿಸಿಕೊಂಡಿದೆ. ಮುಂಬರುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲಿದೆ ಎಂದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು
ಹೇಳಿದರು.
ಶನಿವಾರ ಕಾವೂರಿನಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ‘ ಪಕ್ಷದ ಕಾರ್ಯಕರ್ತರು ಸಮರೋಪಾದಿಯಲ್ಲಿ ಚುನಾವಣಾ ಚಟುವಟಿಕೆಯಲ್ಲಿ ಭಾಗವಹಿಸಬೇಕು.ಅಭ್ಯರ್ಥಿ ಕಿಶೋರ್ ಕುಮಾರ್ ಅವರ ಗೆಲುವಿನ ಅಂತರವನ್ನು ಹೆಚ್ಚಿಸಲು ಅವಿಶ್ರಾಂತವಾಗಿ ದುಡಿಯಬೇಕು ಎಂದರು.
ಶಾಸಕ ಡಾ.ವೈ. ಭರತ್ ಶೆಟ್ಟಿ , ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net