ಹು-ಧಾ ಪೂರ್ವ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

New Navalagundamatha new
Published on

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರದ ಬಿಜೆಪಿ ಸದಸ್ಯತ್ವ ಅಭಿಯಾನ-2024ರ ಕಾರ್ಯಾಗಾರ ಇಲ್ಲಿನ ಅರವಿಂದ ನಗರದ ಪಕ್ಷದ ಕಚೇರಿಯಲ್ಲಿ ಗುರುವಾರ ನಡೆಯಿತು.

ಉದ್ಘಾಟಿಸಿ ಮಾತನಾಡಿದ ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಬಿಜೆಪಿ ಅತಿ ಹೆಚ್ಚು ಕಾರ್ಯಕರ್ತರ ಪಡೆ ಹೊಂದಿದೆ. ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ದೊಡ್ಡದು ಎಂದು ಭಾವನೆ ಬಿಜೆಪಿ ಹೊಂದಿದೆ ಎಂದರು.

ಸದಸ್ಯತ್ವ ಅಭಿಯಾನಕ್ಕೆ ಎಲ್ಲ ವಾರ್ಡ್​ಗಳ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರುಸಹಕಾರ ನೀಡಬೇಕು. ಸದಸ್ಯತ್ವ ಅಭಿಯಾನದ ಮೂಲಕ ಪಕ್ಷ ಸಂಘಟಿಸಿ, ನಾಯಕತ್ವವನ್ನು ಬೆಳೆಸಬೇಕು. ಬೂತನಲ್ಲಿ ಪ್ರತಿ ಮನೆ ಮನೆಗೆ ತಲುಪುವ ಮೂಲಕ ಕ್ಷೇತ್ರದಲ್ಲಿ 1 ಲಕ್ಷಕ್ಕಿಂತ ಅಧಿಕ ಸದಸ್ಯರನ್ನು ನೋಂದಾಯಿಸುವ ಮೂಲಕ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಸದಸ್ಯತಾ ಅಭಿಯಾನದ ಜಿಲ್ಲಾ ಪ್ರಭಾರಿ ನಾರಾಯಣ ಜರತಾರಘರ ಮಾತನಾಡಿದರು. ಕ್ಷೇತ್ರದ ಅಧ್ಯಕ್ಷ ಪ್ರಭು ನವಲಗುಂದಮಠ ಅಧ್ಯಕ್ಷತೆ ವಹಿಸಿದ್ದರು. ಉಪ ಮಹಾಪೌರರಾದ ದುರ್ಗಮ್ಮ ಬಿಜವಾಡ, ಮಾಜಿ ಶಾಸಕ ಅಶೋಕ ಕಾಟವೆ, ಪಾಲಿಕೆ ಸದಸ್ಯೆ ರಾಧಾಬಾಯಿ ಸಫಾರೆ, ಸತೀಶ ಶೇಜವಾಡಕರ, ಸಂತೋಷ ಅರಿಕೇರಿ, ರಂಗಾ ಬದ್ದಿ, ಜಗದೀಶ ಬುಳ್ಳಾನವರ, ರಾಜು ಜರತಾರಘರ, ಶಶಿಕಾಂತ ಬಿಜವಾಡ, ಲಕ್ಷ್ಮೀಕಾಂತ ಘೋಡಕೆ, ಮಂಜುನಾಥ ಬಿಜವಾಡ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net